ಬಂಟ್ವಾಳ: ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ ನಡೆಯಿತು. ಶಾಲೆಯ ಸಹಕಾರದೊಂದಿಗೆ ಅನುಗ್ರಹ ಸಭಾಭವನದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅತಿವಂದನೀಯ ಗುರು ವಲೇರಿಯನ್ ಡಿಸೋಜ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಸಂಚಾರಿ ಪೊಲೀಸ್ ಎ.ಎಸ್.ಐ. ವಿಜಯಕುಮಾರ್ ಹಾಗೂ ಜನಾರ್ಧನ ಕೆ. ಎಂ ಭಾಗವಹಿಸಿದ್ದರು. ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ವಂದನೀಯ ಗುರು ಮೆಲ್ವಿನ್ ಲೋಬೋ, ಇನ್ಫೆಂಟ್ ಜೀಸಸ್ ಅನುದಾನಿತ ಶಾಲೆಯ ಮುಖ್ಯೋಪಾಧ್ಯಾಯಿನಿಟ್ರಿಜಾರವರು, ಜುಮ್ಮಾ ಮಸೀದಿಯ ಕಾರ್ಯದರ್ಶಿಗಳಾಗಿರುವ ಮಹಮ್ಮದ್ ಅದ್ಯಾಡಿ ಉಪಸ್ಥಿತರಿದ್ದರು. ಮಕ್ಕಳನ್ನು ಶಾಲೆಗೆ ಕರೆತರುವ ವಾಹನ ಚಾಲಕರ ಜೊತೆ ಮಾತನಾಡಿದ ಎಎಸ್ಐ ವಿಜಯಕುಮಾರ್, ಚಾಲಕರು ಪಾಲಿಸಬೇಕಾದ ಸಂಚಾರಿ ನಿಯಮಗಳು, ಮುಖ್ಯವಾಗಿ ಮಕ್ಕಳನ್ನು ಕರೆದೊಯ್ಯುವಾಗ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ತಿಳಿಯಪಡಿಸಿದರು. ಚಾಲಕರ ಪ್ರಶ್ನೆಗಳಿಗೆ ಉತ್ತರಿಸಿ, ಸ್ಪಷ್ಟ ಮಾಹಿತಿಯೊಂದಿಗೆ ಮಾರ್ಗದರ್ಶನವನ್ನು ನೀಡಿದರು. ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆ, ಡೈಮಂಡ್ ಆಂಗ್ಲ ಮಾಧ್ಯಮ ಶಾಲೆ, ದೀಪಿಕಾ ಪ್ರೌಢಶಾಲೆ, ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಇನ್ಫೆಂಟ್ ಜೀಸಸ್ ಅನುದಾನಿತ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಿಕ್ಷಕಿ ಅನಿತಾರವರು ಕಾರ್ಯಕ್ರಮವನ್ನು ನಿರೂಪಿಸಿದರು
Be the first to comment on "ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮ"