ದ.ಕ. ಜಿಲ್ಲೆಯಾದ್ಯಂತ, ಅಂಗನವಾಡಿ, ಶಾಲೆ, ಹೈಸ್ಕೂಲು, ಪಪೂ ಕಾಲೇಜುಗಳಿಗೆ ಇಂದು ರಜೆ, ವಿವರಗಳು ಇಲ್ಲಿವೆ

 

PLS CLICK HERE FOR UPDATED NEWS…

ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 9) ದ.ಕ, ಉಡುಪಿಯಲ್ಲಿ ಶಾಲೆ, ಪಿಯುವರೆಗೆ ರಜೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮ ಕೈಗೊಂಡಿದ್ದು, ಅದರಂತೆ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಗ್ಗುಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿದ್ದಲ್ಲಿ ಕೂಡಲೇ ಕಂಟ್ರೋಲ್ ರೂಂ 1077, 0824-2442590ಗೆ ಕರೆ ಮಾಡುವಂತೆ ತಿಳಿಸಲಾಗಿದೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದ.ಕ. ಜಿಲ್ಲೆಯಾದ್ಯಂತ, ಅಂಗನವಾಡಿ, ಶಾಲೆ, ಹೈಸ್ಕೂಲು, ಪಪೂ ಕಾಲೇಜುಗಳಿಗೆ ಇಂದು ರಜೆ, ವಿವರಗಳು ಇಲ್ಲಿವೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*