PLS CLICK HERE FOR UPDATED NEWS…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 6ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮ ಕೈಗೊಂಡಿದ್ದು, ಅದರಂತೆ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಗ್ಗುಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದ್ದು, ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿದ್ದಲ್ಲಿ ಕೂಡಲೇ ಕಂಟ್ರೋಲ್ ರೂಂ 1077, 0824-2442590ಗೆ ಕರೆ ಮಾಡುವಂತೆ ತಿಳಿಸಲಾಗಿದೆ.