ಮಳೆ ಪ್ರಮಾಣ ಹೆಚ್ಚುತ್ತಿದ್ದಂತೆ ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಗುಡ್ಡ ಕುಸಿದ ಘಟನೆ ಭಾನುವಾರ ರಾತ್ರಿ ನಡೆದಿದೆ. ಚಿಕ್ಕಮಗಳೂರು ದಕ ಜಿಲ್ಲೆ ಸಂಪರ್ಕದ ಮಂಗಳೂರು-ವಿಲ್ಲು ಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ.
ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಯನ್ನು ಆವರಿಸಿತ್ತು. ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ತಿಳಿದುಬಂದಿದೆ ಮಳೆ ಇನ್ನಷ್ಟು ಮುಂದುವರಿದರೆ ಹೆಚ್ಚಿನ ಕುಸಿತ ಉಂಟಾಗುವ ಭೀತಿ ಎದುರಾಗಿದೆ. ಸಾವಿರಾರು ವಾಹನಗಳ ಸಂಚಾರವಿರುವ ಈ ಘಾಟಿಯಲ್ಲಿ ಇನ್ನಷ್ಟು ಕುಸಿತ ಉಂಟಾದರೆ ಸಂಪರ್ಕ ಕಡಿತ ಗೊಳ್ಳುವ ಸಾಧ್ಯತೆ ಇದೆ.
Be the first to comment on "ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತ – ಮಳೆ ವಿವರಗಳು ಇಲ್ಲಿವೆ"