ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಂದು ರೆಡ್ ಅಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 9ರಂದು ರಜೆ ಘೋಷಿಸಿದೆ. ಉಡುಪಿ ಜಿಲ್ಲೆಯಲ್ಲೂ ಇದೇ ರೀತಿ ಇಡೀ ಜಿಲ್ಲೆಗೆ ರಜೆ ಘೋಷಿಸಲಾಗಿದೆ.
ಈ ಸಂದರ್ಭ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂಥ ಕಟ್ಟಡಗಳಲ್ಲಿ ಪಾಠ ಮಾಡಬಾರದು. ಶಾಲಾ, ಕಾಲೇಜುಗಳ ಮುಖ್ಯಸ್ಥರು ಕಟ್ಟಡದ ಸುಸ್ಥಿತಿ ಕುರಿತು ಗಮನ ಹರಿಸಬೇಕು. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗರೂಕತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಸಾರ್ವಜನಿಕರು ನದಿ, ತೋಡು, ವಿದ್ಯುತ್ ಕಂಬ, ತಂತಿ ಸಮೀಪ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಮಟಾ ಮತ್ತು ಹೊನ್ನಾವರ ತಾಲೂಕುಗಳಿಗೆ ರಜೆ ಘೋಷಿಸಲಾಗಿದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…