ಸ್ಥಳ ಮಹಜರು ನಡೆಸಲು ದರೋಡೆ ಪ್ರಕರಣದ ಆರೋಪಗಳನ್ನು ಕೊಂಡೊಯ್ಯುತ್ತಿದ್ದ ವೇಳೆ ಪರಾರಿಗೆ ಯತ್ನಿಸಿದ ಘಟನೆ ನಡೆದಿದ್ದು, ಇಬ್ಬರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿದ್ದಾರೆ. ಈ ಘಟನೆ ಮುಲ್ಕಿ ಸಮೀಪದ ಪಡು ಪಣಂಬೂರು ಬಳಿ ನಡೆದಿದೆ.
ಮಂಗಳವಾರ ನಸುಕಿನ ವೇಳೆ ಚಡ್ಡಿಗ್ಯಾಂಗ್‌ನ ನಾಲ್ವರಿದ್ದ ತಂಡ ಮಂಗಳೂರಿನ ಕೋಟೆಕಣಿಯ ಮನೆಯೊಂದಕ್ಕೆ ನುಗ್ಗಿ ದಂಪತಿಯನ್ನು ಬೆದರಿಸಿ 14ಲಕ್ಷ ಮೌಲ್ಯದ ಸೊತ್ತು ದರೋಡೆ ಮಾಡಿ ಪರಾರಿಯಾಗಿತ್ತು. ಬಳಿಕ ಕಾರನ್ನು ಮುಲ್ಕಿ ಬಳಿ ತೊರೆದು, ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಮತ್ತೆ ಮಂಗಳೂರಿಗೆ ಬಂದು ಬೆಂಗಳೂರಿಗೆ ಪರಾರಿಯಾಗಲೆತ್ನಿಸಿತ್ತು. ಅಷ್ಟರಲ್ಲಿ ಅಲರ್ಟ್ ಆದ ಪೊಲೀಸರು ಸಕಲೇಶಪುರ ಮಾರ್ಗದಲ್ಲಿದ್ದ ಬಸ್‌ಅನ್ನು ತಡೆದು ನಿಲ್ಲಿಸಿ ಬಂಧಿಸಿತ್ತು.
ಅದರಂತೆ ಬುಧವಾರ ಸ್ಥಳ ಮಹಜರು ನಡೆಸಲು ಮಂಗಳೂರಿನಿಂದ ಆರೋಪಿಗಳನ್ನು ಮುಲ್ಕಿ ಕಡೆಗೆ ಪೊಲೀಸರು ಕರೆದೊಯ್ಯುತ್ತಿದ್ದರು. ಈ ವೇಳೆ ರಾಜು ಸಿಂಗ್ವಾನಿಯ(24) ಹಾಗೂ ಬಾಲಿ(22) ಎಂಬಿಬ್ಬರು ಆರೋಪಿಗಳು ಪೊಲೀಸರನ್ನು ತಳ್ಳಿ ಪರಾರಿಯಾಗಲು ಯತ್ನಿಸಿದ್ದಾರೆ. ಆಗ ಪೊಲೀಸರು ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ, ಬಳಿಕ ಇಬ್ಬರ ಕಾಲಿಗೆ ಗುಂಡಿಕ್ಕಿದ್ದಾರೆ. ಇದೀಗ ಎಲ್ಲರೂ ಪೊಲೀಸ್ ವಶದಲ್ಲಿದ್ದಾರೆ.
https://bantwalnews.com/2024/07/09/notorious-chaddi-gang-members-arrested/
Be the first to comment on "BREAKING NEWS: ಮಹಜರು ವೇಳೆ ದರೋಡೆ ಗ್ಯಾಂಗ್ ಪರಾರಿ ಯತ್ನ…ಬಳಿಕ ಏನಾಯಿತು?"