ಹಗಲೇ ಮನೆಯ ಬೀಗ ಮುರಿದು ಕಳವು, 4.14 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಜಾಹೀರಾತು

ಬಂಟ್ವಾಳ: ಮನೆ ಮಂದಿ ಬೀಗ ಹಾಕಿ ಹೊರಗೆ ಹೋಗಿದ್ದ ಸಂದರ್ಭ ಸುಮಾರು 4.14 ಲಕ್ಷ ರೂ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕಿನ ಇರಾ ಗ್ರಾಮದಲ್ಲಿ ಶನಿವಾರ ನಡೆದಿದೆ.

ಕಳವು ನಡೆದ ಜಾಗ

ಈ ಕುರಿತು ವನಿತಾ ಎಂಬವರು ದೂರು ನೀಡಿದ್ದು, ಅವರು ಮತ್ತು ಅವರ ಪತಿ ಬೆಳಗ್ಗೆ ಮನೆಯ  ಮುಖ್ಯಬಾಗಿಲಿಗೆ  ಬೀಗ  ಹಾಕಿ ಕೆಲಸಕ್ಕೆ  ಹೋಗಿದ್ದು, ಸಂಜೆ ವೇಳೆ ಅಕ್ಕ ಪೋನ್ ಮಾಡಿ, ತನ್ನ ಮನೆಯ ಎದುರಿನ  ಬಾಗಿಲಿನ ಬೀಗವನ್ನು ಯಾರೋ ಮುರಿದು ಕಳ್ಳರು ನುಗ್ಗಿರುವಂತೆ  ಕಂಡು ಬರುವುದಾಗಿ ತಿಳಿಸಿದ್ದಾರೆ. ಅದರಂತೆ ಕೂಡಲೇ ಮನೆಗೆ ಬಂದು ನೋಡಿದಾಗ, ಮನೆಯ  ಬಾಗಿಲಿಗೆ ಹಾಕಿದ ಬೀಗವನ್ನು  ಯಾವುದೋ ಸಾಧನದಿಂದ ತೆರೆದಿರುವುದು ಕಂಡುಬಂದಿರುತ್ತದೆ. ಬಳಿಕ  ಮನೆಯ ಒಳಗೆ ಹೋಗಿ ನೋಡಲಾಗಿ, ಬೆಡ್ ರೂಮ್ ನಲ್ಲಿದ್ದ ಕಪಾಟನ್ನು ಯಾರೋ ಕಳ್ಳರು ಸಾಧನದಿಂದ ತೆರೆದಿದ್ದು, ಅದರಲ್ಲಿದ್ದ ಬಟ್ಟೆ ಬರೆ  ಹಾಗೂ ಇನ್ನಿತರ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುತ್ತದೆ. ಕಪಾಟಿನ ಸೇಫ್ ಲಾಕರ್ ನಲ್ಲಿದ್ದ ಅಂದಾಜು ರೂ 4,14,000 ಮೌಲ್ಯದ ಒಟ್ಟು 69 ಗ್ರಾಂ ತೂಕದ ಚಿನ್ನಾಭರಣಗಳು ಕಳವಾಗಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನ ಮೇರೆಗೆ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 74/2024  ಕಲಂ: 331(3), 305 THE BHARATIYA NYANA SANHITA(BNS) 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಹಗಲೇ ಮನೆಯ ಬೀಗ ಮುರಿದು ಕಳವು, 4.14 ಲಕ್ಷ ರೂ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*