ಚಂದ್ರಶೇಖರ ಭಂಡಾರಿ
ಚಂದ್ರಶೇಖರ ಭಂಡಾರಿ
ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನಾಗಿ ಚಂದ್ರಶೇಖರ ಭಂಡಾರಿ ಅವರನ್ನು ತಕ್ಷಣ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಇವರು ಅಮ್ಮುಂಜೆ ಗ್ರಾಮದ ದೇವಸ್ಯತೋಟದವರು. ಚಂದ್ರಶೇಖರ ಭಂಡಾರಿ ಅವರು ತಕ್ಷಣ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆ ತಿಳಿಸಿದೆ. ಇದುವರೆಗೆ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುದೀಪ್ ಕುಮಾರ್ ಶೆಟ್ಟಿ ಕಾರ್ಯನಿರ್ವಹಿಸಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…