ಬಾಲಕೃಷ್ಣ ಅಂಚನ್
ಬಂಟ್ವಾಳ: ಬಂಟ್ವಾಳ ವಿಧಾನಸಭೆ ಕ್ಷೇತ್ರದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಬಾಲಕೃಷ್ಣ ಆರ್. ಅಂಚನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಿಸಲಾಗಿದೆ. ಇವರು ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದವರು. ಬ್ಲಾಕ್ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಕಟಣೆ ತಿಳಿಸಿದೆ. ಇದುವರೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೇಬಿ ಕುಂದರ್ ಕಾರ್ಯನಿರ್ವಹಿಸಿದ್ದರು
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…