ದಕ್ಷಿಣ ಕನ್ನಡ ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. ಲಾರ್ವಾ ನಾಶದಿಂದಷ್ಟೇ ಡೆಂಗ್ಯೂ ನಿಯಂತ್ರಣ ಸಾಧ್ಯ. ಡೆಂಗ್ಯೂ ನಿಯಂತ್ರಣಕ್ಕಾಗಿ ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿಟ್ಟುಕೊಳ್ಳುವುದು ಮುಖ್ಯವಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತ್, ತಾಲೂಕು ಪಂಚಾಯತ್, ನಗರ ಪಂಚಾಯತ್, ಪುರಸಭೆ, ನಗರಸಭೆ, ಮಹಾನಗರಪಾಲಿಕೆ ಅಧಿಕಾರಿಗಳಿಗೆ ಸೊಳ್ಳೆ ಉತ್ಪತ್ತಿಯಾಗುವ ಪ್ರದೇಶಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಲು ಸೂಚಿಸಲಾಗಿದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ಪರಿಸರದಲ್ಲಿ ಎಲ್ಲಿಯಾದರೂ ನಿಂತ ನೀರಿನಲ್ಲಿ ಸೊಳ್ಳೆ ಉತ್ಪತ್ತಿಯ ಲಾರ್ವಾ ಕಂಡುಬಂದಲ್ಲಿ ಅದರ ಫೋಟೋ ತೆಗೆದು ಈ ಕೆಳಗಿನ ತಮ್ಮ ಪ್ರದೇಶಕ್ಕೆ ಸಂಬಂಧಿಸಿದ ಅಧಿಕಾರಿಗಳ ಮೊಬೈಲ್ ಸಂಖ್ಯೆಗೆ ಕಳುಹಿಸಿಕೊಡಬೇಕು. ಫೋಟೋದೊಂದಿಗೆ ಸ್ಥಳದ ಸರಿಯಾದ ವಿಳಾಸವನ್ನು ನಮೂದಿಸಿ, ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಲು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ ದೂರವಾಣಿ ನಂಬರ್ ಗಳು ಈ ಕೆಳಗಿನ ಪಟ್ಟಿಯಲ್ಲಿದೆ.
ನಗರ ಪ್ರದೇಶಗಳು:
1) ಮಂಗಳೂರು ಮಹಾನಗರಪಾಲಿಕೆ ಕಂಟ್ರೋಲ್ ರೂಂ: 9449007722,
ಮೇಲ್ವಿಚಾರಕರು: ನಿತಿನ್ – 9743219627, ಚಂದ್ರಹಾಸ- 9482250909, ಚೇತನ್- 9742567033, ಪ್ರವೀಣ್- 8618794892
2) ಉಳ್ಳಾಲ ನಗರಸಭೆ : ಪೌರಾಯುಕ್ತರು – 9449073871
3) ಸೋಮೇಶ್ವರ ಪುರಸಭೆ: ಮುಖ್ಯಾಧಿಕಾರಿಗಳು- 9449452255
4) ಕೋಟೆಕಾರ್ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 9902209485
5) ಮೂಡಬಿದ್ರೆ ಪುರಸಭೆ: ಮುಖ್ಯಾಧಿಕಾರಿಗಳು- 8105926291
6) ಮೂಲ್ಕಿ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 8105926291
7) ಕಿನ್ನಿಗೋಳಿ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 9886080940
8) ಬಜಪೆ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 9902774917
9) ಬಂಟ್ವಾಳ ಪುರಸಭೆ :ಮುಖ್ಯಾಧಿಕಾರಿಗಳು- 9972989637
10) ವಿಟ್ಲ ಪಟ್ಟಣ ಪಂಚಾಯತ್ : ಮುಖ್ಯಾಧಿಕಾರಿ -9606321133
11) ಪುತ್ತೂರು ನಗರಸಭೆ : ಪೌರಾಯುಕ್ತರು – 9886403029
12) ಬೆಳ್ತಂಗಡಿ ಪಟ್ಟಣ ಪಂಚಾಯತ್ : ಮುಖ್ಯಾಧಿಕಾರಿ – 9845518266
13) ಸುಳ್ಯ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 9448253341
14) ಕಡಬ ಪಟ್ಟಣ ಪಂಚಾಯತ್: ಮುಖ್ಯಾಧಿಕಾರಿ – 9980882189
ಗ್ರಾಮಾಂತರ ಪ್ರದೇಶಗಳು:
1) ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ: 9480862110/9483912230
2) ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ: 9620636400
3) ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9480862110/9483912230
4) ಮೂಡಬಿದ್ರೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9448795901
5) ಮೂಲ್ಕಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9901114650
6) ಪುತ್ತೂರು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9480862115
7) ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9902579353
8) ಸುಳ್ಯ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 8217830169
9) ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ : 9902579353