ಮಂಗಳೂರು: ವ್ಯಾಪಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 16ರಂದು ರಜೆಯನ್ನು ಘೋಷಿಸಲಾಗಿದೆ.
ಈ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಹೊರಡಿಸಿದ್ದಾರೆ. ಪದವಿಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ದುರ್ಬಲ/ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂಥ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಶಾಲಾ ಕಾಲೇಜುಗಳ ಮುಖ್ಯಸ್ಥರು ಕಟ್ಟಡಗಳ ಸುಸ್ಥಿತಿ ಕುರಿತು ಗಮನಹರಿಸಬೇಕು ಎಂದು ಅವರು ಸೂಚನೆಯಲ್ಲಿ ತಿಳಿಸಿದ್ದಾರೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು/ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವ ಕಾರಣ ಸಾರ್ವಜನಿಕರು ಅಪಾಯಕಾರಿ ಸನ್ನಿವೇಶಗಳಿಂದ ದೂರವಿದ್ದು, ಜಿಲ್ಲಾಡಳಿತದ ಸಲಹೆ ಸೂಚನೆ ಪಾಲಿಸಬೇಕು ಎಂದು ಸೂಚಿಸಿದ್ದಾರೆ.
Be the first to comment on "ರೆಡ್ ಅಲರ್ಟ್: ನಾಳೆ (ಜುಲೈ 16) ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿಯಿಂದ ಪದವಿಪೂರ್ವ ಕಾಲೇಜುವರೆಗೆ ರಜೆ"