ವಾಹನವೊಂದರಿಂದ ಶಾಮಿಯಾನದ ಸಾಮಾಗ್ರಿಗಳನ್ನು ಇಳಿಸುವ ವೇಳೆ ವಿದ್ಯುತ್ ಶಾಕ್ ನಿಂದ ನಾಲ್ವರು ಕೆಲಸಗಾರರಿಗೆ ಗಾಯವಾಗಿದ್ದು, ಅದರಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಮೃತಪಟ್ಟ ಘಟನೆ ಕಡೇಶಿವಾಲಯ ಸಮೀಪ ಕೆಮ್ಮನ್ ಕಾಡಬೆಟ್ಟು ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಬಿಹಾರ ಮೂಲದ ಕುಂದನ್ ಕುಮಾರ್ (20) ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದು, ಬಾಕಿ 4 ಜನ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇತರ ಗಾಯಾಳುಗಳ ಪೈಕಿ ಓರ್ವ ಸ್ಥಳೀಯರಾಗಿದ್ದರೆ, ಮತ್ತೆ ಮೂವರು ಹೊರರಾಜ್ಯದವರು. ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಹೆಚ್ಚುನ ಮಾಹಿತಿ ಇನ್ನಷ್ಟೇ ಬರಬೇಕಿದೆ.
Be the first to comment on "ಶಾಮಿಯಾನ ಸಾಮಗ್ರಿ ಇಳಿಸುವ ವೇಳೆ ವಿದ್ಯುತ್ ಶಾಕ್: ಓರ್ವ ಕಾರ್ಮಿಕ ಮೃತ್ಯು"