ಬಂಟ್ವಾಳ

ಗ್ಯಾರೇಜು ಮಾಲೀಕರ ಸಂಘದಿಂದ ಆಟಿದ ನೆಂಪು ಕಾರ್ಯಕ್ರಮ

ಜಾಹೀರಾತು

ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ಆಶ್ರಯದಲ್ಲಿ ಆಟಿದ ನೆಂಪು ಕಾರ್ಯಕ್ರಮ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಭಾನುವಾರ ನಡೆಯಿತು.

ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ಆಶ್ರಯದಲ್ಲಿ ಆಟಿದ ನೆಂಪು ಕಾರ್ಯಕ್ರಮ ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಬಂಟ್ವಾಳ ತಹಸೀಲ್ದಾರ್ ಅರ್ಚನಾ ಭಟ್ ಉದ್ಘಾಟಿಸಿದರು. ಅವರು ಮಾತನಾಡಿ ಪಾಶ್ಚತೀಕರಣ ಹಾಗೂ ಆಧುನಿಕರಣದ ಪ್ರಭಾವಕ್ಕೆ ವಾಲುವ ಬದಲು ನಮ್ಮ ದೇಸಿ ಸಂಸ್ಕೃತಿಯನ್ನು ಸರಿಯಾಗಿ ಅರಿತುಕೊಂಡರೆ ಇಲ್ಲಿಯ ಸಂಸ್ಕೃತಿಯ ವೈಶಿಷ್ಠತೆ ಏನೆಂಬುದು ನಮಗೆ ಗೊತ್ತಾಗುತ್ತದೆ. ಆಟಿದ ಕೂಟ ಆಯೋಜಿಸುವ ಮೂಲಕ ಸಂಭ್ರಮದ ವಾತವರಣವನ್ನು ನಿರ್ಮಿಸಿರುವ ಗ್ಯಾರೇಜು ಮಾಲಕರ ಸಂಘದ ಕಾರ್ಯ ಅಭಿನಂದನೀಯ ಎಂದು ತಿಳಿಸಿದರು.
ಯಕ್ಷಗಾನ ಹಾಸ್ಯ ಕಲಾವಿದ ದಿನೇಶ್ ಶೆಟ್ಟಿಗಾರ್ ಕೋಡಪದವು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ವರ್ಷದ ಪ್ರತೀ ತಿಂಗಳು ಮುಖ್ಯವೇ. ಕಾಲ ಬದಲಾಗಿಲ್ಲ ಬದಲಾಗಿ ಮನುಷ್ಯನೇ ಬದಲಾಗಿದ್ದಾನೆ ಎಂದರು.

ಗ್ಯಾರೇಜು ಮಾಲಕರ ಸಂಘ ಬಂಟ್ವಾಳ ವಲಯದ ಅಧ್ಯಕ್ಷ ಸುಧೀರ್ ಪೂಜಾರಿ ಅಧ್ಯಕ್ಷತೆ ವಹಿಸಿ ಮಾತನಾಡಿ ಗ್ಯಾರೇಜು ಮಾಲಕರ ಸಂಘ ತುಳುನಾಡಿನ ಆಚರ ವಿಚಾರಗಳನ್ನು ತಿಳಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸದಸ್ಯರು ರಾತ್ರಿ ಹಗಲೆನ್ನದೆ ಕಾರ್ಯಕ್ರಮದ ಯಶಸ್ಸಿಗೆ ದುಡಿದಿದ್ದು ಸದಸ್ಯರ ಶ್ರಮಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.

ದ.ಕ. ಜಿಲ್ಲಾ ವರ್ತಕರ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸುಭಾಶ್ಚಂದ್ರ ಜೈನ್, ದ.ಕ. ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಜಿಲ್ಲಾಧ್ಯಕ್ಷ ದಿವಾಕರ ಎಂ., ದ.ಕ. ಜಿಲ್ಲಾ ಗ್ಯಾರೇಜ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಅತ್ತಾವರ, ಜಿಲ್ಲಾ ಕೋಶಾಧಿಕಾರಿ ರಾಜ್ ಗೋಪಾಲ್, ವಲಯದ ಕಾರ್ಯದರ್ಶಿ ರಾಜೇಶ್ ಕುಲಾಲ್ , ಕೋಶಾಧಿಕಾರಿ ಭಾಸ್ಕರ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಧಕ ವಿದ್ಯಾರ್ಥಿಗಳಾದ ಪ್ರಣಮ್ಯ, ಶ್ರೀಜ, ರಚೇತ್ ರೈ, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿಗಾರ್ ಕೋಡಪದವು ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ನಿಕಟಪೂರ್ವಾಧ್ಯಕ್ಷ ಜಗದೀಶ್ ರೈ ಸ್ವಾಗತಿಸಿದರು. ಗೌರವ ಸಲಹೆಗಾರ ಸುಧಾಕರ ಸಾಲ್ಯಾನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಧಾಕರ ಸಾಲ್ಯಾನ್ ಹಾಗೂ ವಿನಾಯಕ್ ಜೆಪ್ಪು ಕಾರ್ಯಕ್ರಮ ನಿರೂಪಿಸಿದರು. ಸಿದ್ದೀಕ್ ಮೆಲ್ಕಾರ್ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts