ಕಲ್ಲಡ್ಕ

ಕಂಠಿಕ ಶಾಲೆಯ ಶಿಥಿಲಾವಸ್ಥೆ ಕೊಠಡಿ ತೆರವುಗೊಳಿಸಿದ ಕಲ್ಲಡ್ಕದ ಶೌರ್ಯ ವಿಪತ್ತು ನಿರ್ವಹಣಾ ತಂಡ

ಜಾಹೀರಾತು

ಬಂಟ್ವಾಳ: ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಕಂಠಿಕ ಕಿರಿಯ ಶಾಲೆಯ ಶಿಥಿಲಾವಸ್ಥೆಯ 3 ಕೊಠಡಿಗಳನ್ನು ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡ ಶ್ರಮದಾನದ ಮೂಲಕ ತೆರವು ಮಾಡಿದೆ.

ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು ಶಾಲಾ ಮುಖ್ಯ ಶಿಕ್ಷಕಿ ಹಾಗೂ ಎಸ್.ಡಿ.ಎಂ.ಸಿ. ಮನವಿ ಮೇರೆಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕಲ್ಲಡ್ಕ ವಲಯದ ವಿಪತ್ತು ನಿರ್ವಹಣಾ ತಂಡ ಈ ಕಾರ್ಯ ನಡೆಸಿದೆ.

ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಎನ್ ದೂರವಾಣಿ ಮುಖ್ಯೆನ ಸಂಪರ್ಕಿಸಿ ಶೌರ್ಯ ವಿಪತ್ತು  ತಂಡದ ಕಾರ್ಯಕ್ಕೆ ಪ್ರಶಂಸೆ ವ್ಯಕ್ತಪಡಿಸಿ ಇಲಾಖೆ ಪರವಾಗಿ ಧನ್ಯವಾದ ಹೇಳಿದರು.

ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ರಮೇಶ್, ಹಾಗೂ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಶ್ರಮದಾನದ  ಸಂದರ್ಭ ಭೇಟಿ ನೀಡಿ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಶ್ರಮದಾನದಲ್ಲಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು,ಯೋಜನೆಯ ಕಲ್ಲಡ್ಕ ವಲಯ ಅಧ್ಯಕ್ಷ ತುಳಸಿ, ತಂಡದ ಸಂಯೋಜಕಿ ವಿದ್ಯಾ, ಶೌರ್ಯ ತಂಡದ ಸದಸ್ಯರುಗಳಾದ ಗಣೇಶ್, ರವಿಚಂದ್ರ, ಧನಂಜಯ, ಚಿನ್ನಾ, ಸೌಮ್ಯ,ವಿದ್ಯಾ, ಮೌರೀಶ್, ರಮೇಶ್,ವೆಂಕಪ್ಪ,ಸಂತೋಷ್,ಸತೀಶ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಚೇತನಾ ಕುಮಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಶ್, ಸದಸ್ಯರಾದ ಸೌಮ್ಯ, ರಾಜೇಶ್, ಶಾರದಾ, ದೇವಕಿ, ರಘು, ಶಶಿ,ಭವಾನಿ, ಮೋಹಿನಿ, ಹಿರಿಯ ವಿದ್ಯಾರ್ಥಿಗಳಾದ ರೋಹಿತ್, ಅಕ್ಷತ್, ಚಂದ್ರಶೇಖರ್, ಸುರೇಶ್, ಸತೀಶ್, ಶಿಕ್ಷಕಿಯರಾದ ಮೋನಿಷ, ಬಬಿತಾ, ಅಡುಗೆ ಸಿಬ್ಬಂದಿ ಭವಾನಿ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

 

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts