ಪ್ರಮುಖ ಸುದ್ದಿಗಳು

ಭಾರಿ ಮಳೆ – ದಕ್ಷಿಣ ಕನ್ನಡ, ಕಾಸರಗೋಡು ಜಿಲ್ಲೆಗಳಲ್ಲಿ ಯಾರಿಗೆಲ್ಲಾ ರಜೆ?

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡು ಜಿಲ್ಲಾಧಿಕಾರಿಗಳು ಬುಧವಾರ ಅಂಗನಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಧಾರಾಕಾರ ಮಳೆಯಾಗುತ್ತಿರುವುದು ಹಾಗೂ ಅಲ್ಲಲ್ಲಿ ಹಾನಿಗಳು ಸಂಭವಿಸುತ್ತಿರುವುದು ಇದಕ್ಕೆ ಕಾರಣ

ಸನ್ನದ್ಧರಾಗಿರಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವುದರಿಂದ ಜಿಲ್ಲಾಡಳಿತ ಸಂಪೂಣ೯ ಸನ್ನದ್ಧವಾಗಿರಲು ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಇತರೆ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಸಭೆ ನಡೆಸಿ, ಜಿಲ್ಲೆಯ ಮಳೆ ಹಾನಿ ಪರಿಸ್ಥಿತಿಯನ್ನು ಪರಾಮಶೆ೯ ನಡೆಸಿದರು. ತುತು೯ ಸಂದಭ೯ದಲ್ಲಿ ಕಾಯಾ೯ಚರಣೆಗೆ ತುತು೯ ಸ್ಪಂದನಾ ಪಡೆ ಸದಾ ಸನ್ನದ್ಧ ವಾಗಿರಬೇಕು. ಮುಳುಗಡೆ ಪ್ರದೇಶದ ನಿವಾಸಿಗಳನ್ನು ಆದ್ಯತೆಯಲ್ಲಿ ಸ್ಥಳಾಂತರಿಸಬೇಕು ಎಂದು ಅವರು ತಿಳಿಸಿದರು.
ನದಿ ಪಾತ್ರ ಹಾಗೂ ಕಡಲಕೊರತೆ ಪ್ರದೇಶಗಳಲ್ಲಿ ಪರಿಹಾರ ಕಾಯಾ೯ಚರಣೆಗೆ ಸುಸಜ್ಜಿತ ತಂಡ ಇಡಬೇಕು. ಭೂಕುಸಿತದಿಂದ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾದರೆ, ಶೀಘ್ರವಾಗಿ ತೆರವುಗೊಳಿಸಬೇಕು. ವಿದ್ಯುತ್ ಕಂಬಗಳು ಬಿದ್ದ ಪ್ರಕರಣಗಳಲ್ಲಿ ಕೂಡಲೇ ಕ್ರಮ ಕೈಗೊಂಡು ವಿದ್ಯುತ್ ಪುನರ್ ಸ್ಥಾಪಿಸಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಸಾವ೯ಜನಿಕ, ಜನ ಜಾನುವಾರು ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಎಲ್ಲ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದುಕೊಂಡು ಮಳೆ ಪರಿಸ್ಥಿತಿ ಮೇಲೆ ನಿಗಾ ಇಡಬೇಕು ಎಂದು ಉಸ್ತುವಾರಿ ಸಚಿವರು ಸೂಚಿಸಿದರು.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಪರಿಸ್ಥಿತಿ ಬಗ್ಗೆ ನೆರೆಯ ಜಿಲ್ಲೆಗಳೊಂದಿಗೆ ಸಂಪಕ೯ದಲ್ಲಿದ್ದು, ಸಮನ್ವಯತೆಯಿಂದ ಕಾಯಾ೯ಚರಿಸುವಂತೆ ಸಚಿವರು ತಿಳಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts