ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲೆಯಿಂದ ಪಿಯುಸಿವರೆಗೆ ರಜೆ ಘೋಷಿಸಲಾಗಿದೆ. ಆಗಸ್ಟ್ 1ರಂದು ಹವಾಮಾನ ಮುನ್ಸೂಚನೆ ಹಿನ್ನೆಲೆಯಲ್ಲಿ ಈ ನಿರ್ಧಾರವನ್ನು ಉಭಯ ಜಿಲ್ಲಾಧಿಕಾರಿಗಳು ಕೈಗೊಂಡಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಕಳೆದ ಹಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ರೆಡ್ ಆಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆ. 1 ರಂದು ಉಡುಪಿ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಘೋಷಿಸಿ ಆದೇಶಿಸಿದ್ದಾರೆ. ಅಂತೆಯೇ ದಕ್ಷಿಣ ಕನ್ನಡದಲ್ಲಿ ಯಲ್ಲೊ ಅಲರ್ಟ್ ಇರುವ ಕಾರಣ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ, ಡಿಪ್ಲೊಮಾ, ಎಂಜಿನಿಯರಿಂಗ್, ಐಟಿಐಗಳಿಗೆ ರಜೆ ಘೋಷಿಸಿಲ್ಲ.
Be the first to comment on "ದಕ್ಷಿಣ ಕನ್ನಡ, ಉಡುಪಿ: ನಾಳೆ (ಆಗಸ್ಟ್ 1) ಪಿಯುಸಿವರೆಗೆ ಶಾಲೆಗೆ ರಜೆ"