???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
ಜಿಲ್ಲಾಧಿಕಾರಿ ಕಾಳಜಿ ಕೇಂದ್ರ ವೀಕ್ಷಣೆ ನಡೆಸಿದರು.
ನೇತ್ರಾವತಿ ನದಿಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಬಂಟ್ವಾಳ ದಲ್ಲಿ ಮುಳುಗಡೆಯಾದ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬೇಟಿ ನೀಡಿ ಪರಿಶೀಲನೆ ನಡೆಸಿ ಸಂತ್ರಸ್ತರೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಬಂಟ್ವಾಳ ಎಸ್.ವಿ.ಎಸ್.ಕನ್ನಡ ಮಾಧ್ಯಮ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಕೇಂದ್ರದಲ್ಲಿ ವಾಸ್ತವ್ಯ ಇರುವ ಸಂತ್ರಸ್ತರಿಗೆ ನೀಡಿರುವ ಸೌಲಭ್ಯಗಳ ಬಗ್ಗೆ ತಹಸೀಲ್ದಾರ್ ಡಿ. ಅರ್ಚನಾ ಭಟ್ ಅವರಿಂದ ಮಾಹಿತಿ ಪಡೆದುಕೊಂಡರು. ಜೊತೆಗೆ ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿ, ಮುಳುಗಡೆಯಾದ ಮನೆಗಳ ಸ್ಥಿತಿಗತಿಯ ಕುರಿತು ವಿವರ ಪಡೆದುಕೊಂಡರು.
ಈಗಾಗಲೇ ತಗ್ಗು ಪ್ರದೇಶಗಳು ಜಲಾವೃತಗೊಂಡ ಹಿನ್ನೆಲೆಯಲ್ಲಿ ಅನೇಕ ಮನೆಗಳಿಗೆ ನೀರು ನುಗ್ಗಿದೆ. ಅಂಥ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಜೊತೆಗೆ ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರನ್ನು ಬೇಟಿಯಾಗಿ ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದಿದ್ದೇನೆ. ಮನೆಗೆ ಬೇಟಿ ನೀಡಿದ ಸಂದರ್ಭ ಸ್ಥಳೀಯರು ನೀಡಿದ ಅಹವಾಲು ಸ್ವೀಕರಿಸಿ, ತೋಡಿನಿಂದ ಉಂಟಾಗುವ ಸಮಸ್ಯೆ ಬಗ್ಗೆ ಶೀಘ್ರವಾಗಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ಧೇನೆ. ಪಾಕೃತಿಕ ವಿಕೋಪದಡಿಯಲ್ಲಿ ಕೊಡುವ ತಲಾ 10 ಸಾವಿರ ರೂಪಾಯಿಯನ್ನು ಸಂತ್ರಸ್ತರಿಗೆ ನೀಡುವುದಕ್ಕೆ ಸೂಚನೆ ನೀಡಿದ್ದೇನೆ. ನೆರೆ ಬಂದುಹೋದ ಬಳಿಕ ಮನೆಯಲ್ಲಿ ಇರುವ ಕೆಸರನ್ನು ತೆಗಿಸಲು ಅಧಿಕಾರಿಗಳಿಗೆ ತಿಳಿಸಿದ್ದು, ಈಗಾಗಲೇ ನೆರೆ ಕಡಿಮೆಯಾದ ಮನೆಗಳ ಕೆಸರನ್ನು ಶುಚಿಮಾಡುವ ಕಾರ್ಯ ಕೈಗೊಂಡಿದ್ದಾರೆ ಎಂದು ಅವರು ಬಳಿಕ ಸುದ್ದಿಗಾರರಿಗೆ ತಿಳಿಸಿದರು.
ಈ ಸಂದರ್ಭ ಸಹಾಯಕ ಕಮೀಷನರ್ ಹರ್ಷವರ್ಧನ ಪಿ.ಜೆ, ಪ್ರೋಬೆಷನರಿ ಐ.ಎ.ಎಸ್ ಅಧಿಕಾರಿ ಶ್ರವಣ್, ತಹಸೀಲ್ದಾರ್ ಅರ್ಚನಾ ಭಟ್, ಪುರಸಭಾ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೊ, ತಾಲೂಕು ಆರೋಗ್ಯಾಧಿಕಾರಿ ಆಶೋಕ್ ರೈ, ಪುರಸಭಾ ಆರೋಗ್ಯ ನಿರೀಕ್ಷಕ ರತ್ನಪ್ರಸಾದ್, ಕಂದಾಯ ನಿರೀಕ್ಷಕ ಜನಾರ್ದನ, ವಿಜಯ್, ಸಿಬ್ಬಂದಿಗಳಾದ ಸದಾಶಿವ ಕೈಕಂಬ ಮತ್ತಿತರರು ಉಪಸ್ಥಿತರಿದ್ದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…