ಬಂಟ್ವಾಳದಲ್ಲಿ ನೆರೆಹಾನಿ ಸ್ಥಳಗಳನ್ನು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ್ ಬುಧವಾರ ವೀಕ್ಷಿಸಿದರು. ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಇಲ್ಲಿನ ಪರಿಸ್ಥಿತಿಯ ಕುರಿತು ಮಾಹಿತಿ ನೀಡಿದರು.
ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಪ್ರವಾಸವನ್ನು ಕೈಬಿಟ್ಟು, ಪರಿಹಾರ ಕಾರ್ಯವನ್ನು ಮಾಡಲು ಪ್ರಥಮ ಆದ್ಯತೆ ನೀಡಬೇಕು. ತಾಲೂಕುಗಳಲ್ಲಿ ಆಯಾ ಎಂ.ಎಲ್.ಎ.ಗಳ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ಮಾಡಿ, ಕನಿಷ್ಠ 5 ಕೋಟಿ ರೂಗಳಾದರೂ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಬಂಟ್ವಾಳ ಬಡ್ಡಕಟ್ಟೆ, ನಾವೂರ ಹಾಗೂ ಜಕ್ರಿಬೆಟ್ಟು ಡ್ಯಾಂಗೆ ಅಶೋಕ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾಹಿತಿ ನೀಡಿದರು. ವಿಧಾನಪರಿಷತ್ ಸದಸ್ಯ.ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬಂಟ್ವಾಳ ಬಿಜೆಪಿ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಜೆಡಿಎಸ್ ಮುಖಂಡ ಅಕ್ಷಿತ್ ಸುವರ್ಣ, ಬಿಜೆಪಿ ಪ್ರಮುಖರಾದ ಪೂಜಾ ಪೈ, ಸುಲೋಚನ ಜಿ.ಕೆ.ಭಟ್, ದೇವಪ್ಪ ಪೂಜಾರಿ, ಹರಿಕೃಷ್ಣ ಬಂಟ್ವಾಳ, ಸಂದೇಶ್ ಶೆಟ್ಟಿ, ದಿನೇಶ್ ಅಮ್ಟೂರು, ಗೋವಿಂದ ಪ್ರಭು, ಆರ್.ಸಿ.ನಾರಾಯಣ, ರಾಮ್ ದಾಸ ಬಂಟ್ವಾಳ, ದೇವದಾಸ ಶೆಟ್ಟಿ, ಸುದರ್ಶನ ಬಜ, ಪುರುಷೋತ್ತಮ ಶೆಟ್ಟಿ, ದಿನೇಶ್ ಶೆಟ್ಟಿ ದಂಬೆದಾರ್, ಆನಂದ ಶಂಭೂರು, ಶಿವಪ್ರಸಾದ್ ಶೆಟ್ಟಿ ಅನೆಯಾಲಕೋಡಿ, ಪುಷ್ಪರಾಜ ಚೌಟ, ರಶ್ಮಿತ್ ಶೆಟ್ಟಿ, ಸಂತೋಷ್ ರಾಯಿಬೆಟ್ಟು, ಕಾರ್ತಿಕ್ ಬಲ್ಲಾಳ್, ಯಶವಂತ ನಗ್ರಿ,ಯಶೋಧರ ಕರ್ಬೆಟ್ಟು ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಸುದ್ದಿಗೋಷ್ಠಿ ಸಂದರ್ಭ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಜರಿದ್ದರು.