ಬಿ.ಸಿ.ರೋಡಿನ ಪ್ರಮುಖ ರಸ್ತೆಯಲ್ಲಿ ಮಳೆಯಿಂದ ವಾಹನಸಂಚಾರಕ್ಕೆ ಅಡಚಣೆ ಉಂಟಾಯಿತು. ಚಿತ್ರ: ಕಿಶೋರ್ ಪೆರಾಜೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಆ.2ರಂದು) ಶಾಲೆ, ಹೈಸ್ಕೂಲ್, ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದರೆ,ಕಾಸರಗೋಡು ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಿಸಲಾಗಿದೆ.