ಪ್ರಮುಖ ಸುದ್ದಿಗಳು

ಇಲೆಕ್ಟ್ರಿಕ್ ಆಟೋರಿಕ್ಷಾಗಳಿಗೆ ದ.ಕ. ಜಿಲ್ಲೆಯಾದ್ಯಂತ ಸಂಚರಿಸಲು ಅನುಮತಿ

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಲೆಕ್ಟ್ರಿಕ್ ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ಮುಕ್ತವಾಗಿ ಸಂಚರಿಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಆದೇಶಿಸಿದ್ದಾರೆ.

 ಈ ನಿಟ್ಟಿನಲ್ಲಿ ಎಲ್ಲ ಆಟೋರಿಕ್ಷಾಗಳೊಂದಿಗೆ ಇ- ಆಟೋರಿಕ್ಷಾಗಳು ಹಾಗೂ ಮೆಥನಾಲ್ ಮತ್ತು ಇಥನಾಲ್ ಬಳಸಿ ಸಂಚರಿಸುವ ಆಟೋರಿಕ್ಷಾಗಳಿಗೆ ವಲಯ 1 ರಲ್ಲಿ ನೀಲಿ ಬಣ್ಣದ ಹಾಗೂ ವಲಯ 2 ರಲ್ಲಿ ಹಳದಿ ಬಣ್ಣದ  ಸ್ಟಿಕ್ಕರ್ / ಗುರುತಿನ ಸಂಖ್ಯೆಗಳನ್ನು ಪೊಲೀಸ್ ಇಲಾಖೆಯಿಂದ ಪಡೆದು ಅಂಟಿಸಲು ಜಿಲ್ಲಾಧಿಕಾರಿಗಳ  ದಿನಾಂಕ 24-11-2022ರ ಅಧಿಸೂಚನೆ  ಮತ್ತು 23-01-2023 ರ ಮಾರ್ಪಾಡು ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಲು ಆರ್.ಟಿ.ಓ. ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಅಲ್ಲದೇ, ಈ ಸಂಬಂಧ ಅವಶ್ಯವಿರುವ ಸೂಚನಾ ಫಲಕಗಳನ್ನು ಅಳವಡಿಸಲು ಮಂಗಳೂರು ನಗರ ಡಿಸಿಪಿ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಅಧಿಕಾರ ನೀಡಲಾಗಿದೆ.
ಮೋಟಾರು ವಾಹನ ಕಾಯಿದೆಯಂತೆ ಪಾಕಿರ್ಂಗ್ ಸ್ಥಳಗಳನ್ನು ಮತ್ತು ನಿಲುಗಡೆ ನಿಲ್ದಾಣಗಳಿಗೆ ಸ್ಥಳಗಳನ್ನು ನಿರ್ಧರಿಸಲು ಮಂಗಳೂರು ನಗರದಲ್ಲಿ ಮಹಾನಗರಪಾಲಿಕೆ ಆಯುಕ್ತರು ಹಾಗೂ ಇತರೆ ಪ್ರದೇಶಗಳಲ್ಲಿ ಸಂಬಂಧಿಸಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಅಧಿಕಾರ ನೀಡಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts