ಬಂಟ್ವಾಳ: ದ.ಕ.ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಬಂಟ್ವಾಳ ತಾಲೂಕಿನ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅಧ್ಯಕ್ಷ ಮತ್ತು ಕಾರ್ಯದರ್ಶಿಗಳ ಸಮಾಲೋಚನಾ ಸಭೆ ಬಿಸಿರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು.
ಅಧ್ಯಕ್ಷತೆ ವಹಿಸಿದ್ದ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾಧ್ಯಕ್ಷ ಕೆ.ಪಿ. ಸುಚರಿತ ಶೆಟ್ಟಿ ಮಾತನಾಡಿ, ಕೃಷಿ ಮತ್ತು ಹೈನುಗಾರಿಕೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ, ಕೃಷಿ ಸಂಸ್ಕೃತಿಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ದನ ಸಾಕಣಿಕೆ ಹೆಚ್ಚಾಗಬೇಕಿದೆ. ಯುವಸಮುದಾಯ ಕೃಷಿ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಾಗ ಸಶಕ್ತ ಭಾರತ ನಿರ್ಮಾಣವಾಗಲು ಸಾಧ್ಯವಾಗಬಹುದು ಎಂದು ಅವರು ತಿಳಿಸಿದರು.
ಹೈನುಗಾರಿಕಾ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ವೈದ್ಯರು ಮತ್ತು ಅಧ್ಯಕ್ಷರುಗಳು ಅನೇಕ ಚರ್ಚೆಗಳನ್ನು ನಡೆಸಿ, ಸಾಧಕ -ಭಾದಕಗಳನ್ನು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಂಡರು. ಒಕ್ಕೂಟದ ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ನಿರ್ದೇಶಕ ರುಗಳಾದ ಪದ್ಮನಾಭ ಶೆಟ್ಟಿ ಅರ್ಕಜೆ, ಸುಭದ್ರಾ ರಾವ್, ಸವಿತಾ ಶೆಟ್ಟಿ, ಎಎಂ.ಡಿ.ವಿವೇಕ್ ,ವ್ಯವಸ್ಥಾಪಕ ಡಾ. ರವಿರಾಜ್ ಉಡುಪ, ಉಪವ್ಯವಸ್ಥಾಪಕ ಡಾ ಕೇಶವ ಹಾಗೂ ಒಕ್ಕೂಟದ ಅಧಿಕಾರಿಗಳು ಉಪಸ್ಥಿತರಿದ್ದರು. ನಿರ್ದೇಶಕ ಸುಧಾಕರ ರೈ ಸ್ವಾಗತಿಸಿ, ನಿರ್ದೇಶಕಿ ಸವಿತಾ ಶೆಟ್ಟಿ ವಂದಿಸಿದರು. ವಿಸ್ತರಣಾಧಿಕಾರಿ ಜಗದೀಶ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಬಂಟ್ವಾಳ ತಾಲೂಕು: ಹಾಲು ಉತ್ಪಾದಕ ಸಹಕಾರಿ ಸಂಘಗಳ ಸಮಾಲೋಚನಾ ಸಭೆ"