ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ ಹಿಂದು ಜಾಗರಣಾ ವೇದಿಕೆ ವತಿಯಿಂದ ನಡೆಯಲಿದೆ ಎಂದು ಜಾಗರಣಾ ವೇದಿಕೆ ವಿಟ್ಲ ತಾಲೂಕು ಪ್ರಕಟಣೆ ತಿಳಿಸಿದೆ.
ಭಾನುವಾರ ಮಧ್ಯಾಹ್ನ 2.30ರಿಂದ ಮಾಣಿ ಶ್ರೀರಾಜರಾಜೇಶ್ವರಿ ಭಜನಾ ಮಂದಿರ, ಮೆಲ್ಕಾರ್ ರಾಮದೇವ ಸಭಾಭವನ ಹಾಗೂ ವೀರಕಂಭ ಶಾರದಾ ಭಜನಾ ಮಂದಿರದಿಂದ ಏಕಕಾಲಕ್ಕೆ ವಾಹನ ಜಾಥಾ ಮತ್ತು ಸಭಾ ಕಾರ್ಯಕ್ರಮ ಸಂಜೆ 4 ಗಂಟೆಗೆ ನಡೆಯಲಿದೆ. ಮಂಗಳೂರು ಗ್ರಾಮಾಂತರ ಜಿಲ್ಲೆಯ ಸಂಘಚಾಲಕ ಯಶವಂತ ಮೂಲ್ಕಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾರತೀಯ ಭೂಸೇನೆಯ ನಿವೃತ್ತ ಯೋಧ ಜಯಕುಮಾರ ಕೆದಿಲ ಉಪಸ್ಥಿತರಿರುವರು. ಹಿಂದು ಜಾಗರಣಾ ವೇದಿಕೆ ಪ್ರಾಂತ ಕಾರ್ಯಕಾರಿಣಿ ಸದಸ್ಯರಾದ ಪ್ರಜ್ಞಾ ಕಶ್ಯಪ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಆ.11ರಂದು ಕಲ್ಲಡ್ಕದಲ್ಲಿ ಅಖಂಡ ಭಾರತ ಸಂಕಲ್ಪ ದಿನಾಚರಣೆ"