ಪ್ರಮುಖ ಸುದ್ದಿಗಳು

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪುನರಾರಂಭ

ಜಾಹೀರಾತು
ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯು ಕುಂಟುತ್ತಾ ಸಾಗಿದ್ದು ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಯನ್ನು ಮನಗೊಂಡು ಇದನ್ನು ಬಗೆಹರಿಸಲು ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕರಾದ ಹರೀಶ್ ಪೂಂಜ ಅವರು ಜೊತೆಸೇರಿ ಎರಡು ತಿಂಗಳುಗಳಿಂದ ನಿರಂತರ ಸಭೆಗಳನ್ನು ನಡೆಸಿದ್ದರು.ಇದಕ್ಕೆ ಫಲಶೃತಿ ದೊರಕಿದ್ದು ಇದೀಗ ರಾಷ್ಟ್ರೀಯ ಹೆದ್ದಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯ ಅಡಿಯಲ್ಲಿ ಕಾಮಗಾರಿಯನ್ನು ಗುತ್ತಿಗೆದಾರರಾದ ಡಿ.ಪಿ ಜೈನ್‌ ಅವರಿಂದ ಮುಗ್ರೋಡಿ ಕಂಸ್ಟ್ರಕ್ಷನೆಗೆ ವಹಿಸಲಾಗಿದೆ‌.ನೂತನ ಗುತ್ತಿಗೆದಾರರು ಇಂದು ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ಕಾಮಗಾರಿ ಪ್ರಾರಂಭಗೊಳಿಸಿದ್ದು ಇದಕ್ಕೆ ಸಂಸದರು ಮತ್ತು ಶಾಸಕರು ಚಾಲನೆ ನೀಡುವುದರ ಜೊತೆಗೆ ಕಾಮಗಾರಿಯ ಪರಿಶೀಲನೆ ನಡೆಸಿದರು.

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts