BUS ACCIDENT AT PHARANGIPETE:
ಶುಕ್ರವಾರ ಬೆಳಗ್ಗೆ ನಡೆದ ಘಟನೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸು ಪಲ್ಟಿಯಾಗಿ ಹತ್ತಕ್ಕೂ ಅಧಿಕ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪರಂಗಿಪೇಟೆ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ಘಟನೆ ನಡೆದಿದೆ.
ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಫರಂಗಿಪೇಟೆ ಹತ್ತನೇ ಮೈಲಿ ಕಲ್ಲು ಎಂಬಲ್ಲಿ ಪಲ್ಟಿಯಾಗಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ, ಯಾವುದೇ ದೊಡ್ಡ ತಿರುವುಗಳಿಲ್ಲದ ಈ ಜಾಗದಲ್ಲಿ ಬಸ್ ಹೇಗೆ ಪಲ್ಟಿಯಾಯಿತು ಎಂಬ ಕುರಿತು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದಾರೆ. ಘಟನೆಯಲ್ಲಿ ಬಸ್ ಪ್ರಯಾಣಿಕರನೇಕರು ಗಾಯಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಜಮಾಯಿಸಿ, ಮಂಗಳೂರಿಗೆ ತೆರಳುವ ವಾಹನಗಳಲ್ಲಿ ಗಾಯಾಳುಗಳನ್ನು ಕಳುಹಿಸಿದರು. ಇದರಿಂದ ಕೂಡಲೇ ಅವರಿಗೆ ವೈದ್ಯಕೀಯ ಚಿಕಿತ್ಸೆ ದೊರಕಲು ಸಹಾಯವಾಯಿತು. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಎಸ್.ಐ. ಸುತೇಶ್ ಮತ್ತವರ ಸಿಬಂದಿ ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಫರಂಗಿಪೇಟೆ ಸಮೀಪ ಹೆದ್ದಾರಿಯಲ್ಲೇ ಮಗುಚಿದ ಬೆಂಗಳೂರು – ಮಂಗಳೂರು ಬಸ್"