ಬಂಟ್ವಾಳ

ರಾಜ್ಯಮಟ್ಟದ ವೈಟ್‌ಲಿಫ್ಟಿಂಗ್ ಚಾಂಪಿಯನ್‌ಷಿಪ್: ರೈಫಾನ್ ತೃತೀಯ

ಮೈಸೂರಿನಲ್ಲಿ ನಡೆದ ಬಾಲಕರ ಕರ್ನಾಟಕ ರಾಜ್ಯ ವೈಟ್‌ಲಿಪ್ಟಿಂಗ್ ಚಾಂಪಿಯನ್‌ಷಿಪ್ 2024-25ರಲ್ಲಿ ರೈಫಾನ್ ಅಹಮದ್ 3ನೇ ಸ್ಥಾನ ಪಡೆದಿದ್ದಾರೆ. ಕರ್ನಾಟಕ ರಾಜ್ಯ ವೈಟ್‌ಲಿಫ್ಟರ್ ಸಂಸ್ಥೆ ಮತ್ತು ಮೈಸೂರು ಜಿಲ್ಲಾ ವೈಟ್‌ಲಿಫ್ಟರ್ ಸಂಸ್ಥೆ, ದೈಹಿಕ ಶಿಕ್ಷಕರ ಅಕಾಡೆಮಿ ವತಿಯಿಂದ ಮೈಸೂರಿನ ಮಹಾಜನ ಡಿಗ್ರಿ ಕಾಲೇಜು ಕ್ರೀಡಾಂಗಣದಲ್ಲಿ ಆಗಸ್ಟ್ 17-18ರಂದು ನಡೆದ ರಾಜ್ಯಮಟ್ಟದ ಚಾಂಪಿಯನ್‌ಷಿಪ್‌ನಲ್ಲಿ ಜೂನಿಯರ್  61 ಕೆ.ಜಿ. ವಿಭಾಗದಲ್ಲಿ ರೈಫಾನ್ ಅಹಮದ್ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಮಂಗಳೂರು ಎಸ್.ಡಿ.ಎಂ. ಕಾಲೇಜಿನಲ್ಲಿ ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿಯಾಗಿರುವ ರೈಫಾನ್ ಅಹಮದ್, ಬಿ.ಸಿ. ರೋಡ್ ಶಾಂತಿಅಂಗಡಿ ನಿವಾಸಿ ರಫೀಕ್ – ಜೊಹರಾ ದಂಪತಿ ಪುತ್ರ.  ಮಂಗಳೂರಿನ ಮಂಗಳಾ ಥ್ರೋವರ‍್ಸ್ ಅಕಾಡೆಮಿಯಲ್ಲಿ ಪುಷ್ಪರಾಜ್  ಹೆಗ್ಡೆ ಮತ್ತು ಸುದರ್ಶನ್  ಅವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ