ಬಂಟ್ವಾಳ: ಮಧ್ಯಂತರ ಕಿರುಚಿತ್ರದ ನಿರ್ದೇಶನಕ್ಕಾಗಿ ಅತ್ಯುತ್ತಮ ಚೊಚ್ಚಲ ನಿರ್ದೇಶಕ ವಿಭಾಗದಲ್ಲಿ ಚಿತ್ರರಂಗದ ಅತ್ಯುನ್ನತ ಸ್ವರ್ಣಕಮಲ ಪ್ರಶಸ್ತಿಗೆ ಆಯ್ಕೆಯಾದ ಬಂಟ್ವಾಳ ಮೂಲದ ಬಸ್ತಿ ದಿನೇಶ್ ಶೆಣೈ ಅವರನ್ನು ಸೋಮವಾರ ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ನಡೆದ ಋಗುಪಾಕರ್ಮ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಶೋಕ ಶೆಣೈ, ಮೊಕ್ತೇಸರ ಭಾಮಿ ನಾಗೇಂದ್ರನಾಥ ಶೆಣೈ, ಆಚಾರ್ಯ ಮನೆತನದ ಬಿ.ಯೋಗೀಶ ಆಚಾರ್ಯ, ವೇ|ಮೂ| ಮುರಳೀಧರ ಭಟ್, ನಿರ್ದೇಶಕರ ಸಹೋದರ ಬಸ್ತಿ ಮಾಧವ ಶೆಣೈ ಮೊದಲಾದವರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸ್ವರ್ಣಕಮಲಕ್ಕೆ ಆಯ್ಕೆಯಾದ ಬಸ್ತಿ ದಿನೇಶ್ ಶೆಣೈ ಅವರಿಗೆ ಸನ್ಮಾನ"