ಬಂಟ್ವಾಳ: ಮಂಗಳೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪವಿರುವ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಯುವಮೋರ್ಚಾ ವತಿಯಿಂದ ದೂರು ನೀಡಲಾಗಿದೆ. ಮೂಡಾ ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿಗಳ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ಮಂಗಳೂರು ಪಾಲಿಕೆಯ ಮುಂಭಾಗ ಕಾಂಗ್ರೆಸ್ ನಡೆಸುತ್ತಿರುದ್ದ ಪ್ರತಿಭಟನೆ ಸಂದರ್ಭ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ರಾಜ್ಯಪಾಲರ ವಿರುದ್ಧ ನೀಡಿದ ಹೇಳಿಕೆಗಳು ಪ್ರಚೋದನಕಾರಿಯಾಗಿವೆ ಎಂದು ಆಪಾದಿಸಿರುವ ಯುವಮೋರ್ಚಾ, ಬಂಟ್ವಾಳ ನಗರ ಪೊಲೀಸರು ದೂರು ನೀಢಿದೆ. ಪುರಸಭಾ ಸದಸ್ಯ ಹರಿಪ್ರಸಾದ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಐವನ್ ಡಿಸೋಜ ಅವರ ವಿರುದ್ಧ ದೂರು ನೀಡಿದ್ದಾರೆ. ಯುವಮೋರ್ಚಾ ಬಂಟ್ವಾಳ ಅಧ್ಯಕ್ಷ ದಿನೇಶ್ ದಂಬೆದಾರು, ಸುರೇಶ್ ಕೋಟ್ಯಾನ್, ಪ್ರಮುಖರಾದ ಯಶೋಧರ್ ಕರ್ಬೇಟ್ಟು. ಕಾರ್ತಿಕ್ ಬಳ್ಳಾಲ್, ಹರೀಶ್ ಶೆಟ್ಟಿ, ಮನೋಜ್ ಶೆಟ್ಟಿ, ಹರಿಪ್ರಸಾದ್ ಭಂಡಾರಿಬೆಟ್ಟು, ಸಂಪತ್ ಕುಮಾರ್ ಕಡೇಶ್ವಾಲ್ಯ ಪುರುಷೋತ್ತಮ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
IFTAAR ORGANISED BY FORMER MINISTER RAMANATHA RAI AT PANEMANGALORE (more…)