ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರುಗಳು ಇಡೀ ಸಮಾಜದ ಆಸ್ತಿಯಾಗಿದ್ದು, ಅವರ ಆದರ್ಶವೇ ನಮಗೆ ದಾರಿದೀಪ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.
ಮಂಗಳವಾರ ಬಿ.ಸಿ.ರೋಡಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪನ್ಯಾಸ ನೀಡಿ, ಶೋಷಣೆಯ ವಿರುದ್ಧ ಮೌನ ಕ್ರಾಂತಿ ಮಾಡಿದ ನಾರಾಯಣ ಗುರುಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಇಡೀ ಮನುಕುಲಕ್ಕೆ ದಾರಿ ತೋರಿದ ಸಂತರೆನಿಸಿದ್ದಾರೆ ಎಂದರು.
ಬಂಟ್ವಾಳ ತಹಸೀಲ್ದಾರ್ ಅರ್ಚನಾ ಡಿ.ಭಟ್ ಅಧ್ಯಕ್ಷತೆ ವಹಿಸಿದ್ದರು. ಬೂಡಾ ಅಧ್ಯಕ್ಷ ಬೇಬಿ ಕುಂದರ್, ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಬಿ.ಸಂಜೀವ ಪೂಜಾರಿ, ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಶೈಲಜಾ ರಾಜೇಶ್, ದ.ಕ.ಜಿಲ್ಲಾ ಮೂರ್ತೆದಾರರ ಸಹಕಾರ ಮಹಾಮಂಡಲದ ಅಧ್ಯಕ್ಷ ಕೆ.ಸಂಜೀವ ಪೂಜಾರಿ, ರಾಜ್ಯ ಸರಕಾರದ ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಬಂಟ್ವಾಳ ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಬಿಲ್ಲವ ಸಂಘದ ಉಪಾಧ್ಯಕ್ಷ ಭುವನೇಶ್ ಪಚ್ಚಿನಡ್ಕ, ಪ್ರಧಾನ ಕಾರ್ಯದರ್ಶಿ ರಮೇಶ್ ಬಿ.ತುಂಬೆ, ಕೋಶಾಧಿಕಾರಿ ಆನಂದ ಸಾಲಿಯಾನ್ ಶಂಭೂರು, ತಾ.ಪಂ.ಇಒ ಸಚಿನ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ. ಅಶೋಕ್‌ಕುಮಾರ್ ರೈ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ನೋಂದಣಾಧಾರಿ ಕವಿತಾ, ಉಪತಹಸೀಲ್ದಾರ್‌ಗಳಾದ ರಾಜೇಶ್ ನಾಯ್ಕ್, ವಿಜಯ ವಿಕ್ರಮ್, ಕಂದಾಯ ನಿರೀಕ್ಷಕ ವಿಜಯ್ ಆರ್. ಮೊದಲಾದವರು ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ ಜೆ. ಸ್ವಾಗತಿಸಿದರು. ಚುನಾವಣಾ ಶಾಖೆಯ ಶ್ರೀಕಲಾ ಬಿ.ಕಾರಂತ ವಂದಿಸಿದರು. ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು.