ದಕ್ಷಿಣ ಕನ್ನಡ ಜಿಲ್ಲಾ ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಶಾಲೆಗಳ ಒಕ್ಕೂಟವು(ಎಐಸಿಎಸ್) ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟದಲ್ಲಿ ಬಂಟ್ವಾಳದ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳ ತಂಡವು ಸೀನಿಯರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದೆ.
ಕಾರ್ಮೆಲ್ ಸ್ಕೂಲ್, ಮೂಡಬಿದಿರೆಯಲ್ಲಿ ನಡೆದ ಪಂದ್ಯದಲ್ಲಿ ದೀನ್‌ರಾಮ್ ಶೆಟ್ಟಿ, ದೇವಿಶ್ ಎಸ್ ರೈ, ಆರನ್ ರಿಕ್ ಮೊರಸ್, ತೇಜಸ್ ಆರ್ ಶೆಟ್ಟಿ, ತನಯ್ ಡಿ ಶೆಟ್ಟಿ ಇವರನ್ನೊಳಗೊಂಡ ತಂಡವು 17 ವಯೋಮಾನದೊಳಗಿನ ಮಿಕ್ಸೆಡ್ ವಿಭಾಗದಲ್ಲಿ ಪ್ರಶಸ್ತಿ ತನ್ನದಾಗಿಸಿಕೊಂಡಿದೆ. ಇವರಲ್ಲಿ 10ನೇ ತರಗತಿಯ ದೀನ್‌ರಾಮ್ ಶೆಟ್ಟಿ ಬೋರ್ಡ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಸ್ಕೂಲ್: ಚೆಸ್ ಕ್ರೀಡೆಯಲ್ಲಿ ಸಾಧನೆ"