ಬಂಟ್ವಾಳ

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಬಿ.ಮೂಡ ಸರಕಾರಿ ಪ್ರಾಥಮಿಕ ವಿದ್ಯಾರ್ಥಿಗಳ ಸಾಧನೆ

ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬಿ.ಮೂಡದ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಇವರಲ್ಲಿ ಮೂವರು ಪ್ರಥಮ, ಒಬ್ಬರು ದ್ವಿತೀಯ ಹಾಗೂ ಮೂವರು ತೃತೀಯ ಬಹುಮಾನ ಪಡೆದಿದ್ದಾರೆ. 4ನೇ ತರಗತಿಯ ವಿಹಾನ್ ಛದ್ಮವೇಷದಲ್ಲಿ ಪ್ರಥಮ, 4ನೇ ತರಗತಿಯ ಯಜ್ಞಶ್ರೀ ಇಂಗ್ಲೀಷ್ ಕಂಠಪಾಠದಲ್ಲಿ ಪ್ರಥಮ, 2ನೇ ತರಗತಿಯ ಸಮರ್ಥ ಅಭಿನಯಗೀತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. 3ನೇ ತರಗತಿಯ ನಮಸ್ಯಾ ಚಿತ್ರಕಲೆಯಲ್ಲಿ ದ್ವಿತೀಯ,6ನೇ ತರಗತಿಯ ಶಿವರಾಜ್ ಆಶುಭಾಷಣದಲ್ಲಿ ತೃತೀಯ, 7ನೇ ತರಗತಿಯ ಕೃತೇಶ್ (ಚಿತ್ರಕಲೆಯಲ್ಲಿ ತೃತೀಯ ಹಾಗೂ 7ನೇ ತರಗತಿಯ ಬಿನೀತ್ ಕವನವಾಚನದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ