ಪ್ರಮುಖ ಸುದ್ದಿಗಳು

ದಕ್ಷಿಣ ಕನ್ನಡದಲ್ಲಿ ಇನ್ನೂ ಇದೆ ಮಳೆ ಅಲರ್ಟ್!!…ಕೊಡೆ ಮರೆತುಹೋಗಬೇಡಿ

ಜಾಹೀರಾತು

ಚಿತ್ರ – ಸಾಂದರ್ಭಿಕ

KARNATAKA ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದ್ದರೂ, UTTARA KANNADA ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ DAKSHINA KANNADA ಜಿಲ್ಲೆಗಳಲ್ಲಿ ಭಾರೀ ಮಳೆ ಸೂಚನೆಯನ್ನು ಹವಾಮಾನ ಇಲಾಖೆ ಮಂಗಳವಾರ ನೀಡಿದೆ.

ಮಂಗಳವಾರ  (COASTAL KARNATAKA) ಕರಾವಳಿಯ ಎರಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ನೆಚ್ಚರಿಕೆ ನೀಡಿದ್ದು, ಯಲ್ಲೋ ಅಲರ್ಟ್ (YELLOW ALERT) ಘೋಷಿಸಿದೆ.

ಕಲಬುರಗಿ, ಬೀದರ್, ವಿಜಯಪುರ, ರಾಯಚೂರು ಸಹಿತ ಹಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಂಗಳೂರಿನಲ್ಲಿ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಉಡುಪಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆ ಇರಲಿದೆ. ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣದಿಂದ ಹಗುರ ಮಳೆಯಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ.

FOR MORE UPDATES IN BANTWALNEWS, CLICK THIS LINK AND JOIN

https://chat.whatsapp.com/HFlElhY4ERbFbNFcQmp0r3

\

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.