ವಾಹನಗಳ ಡಿಕ್ಕಿ, ಪಾಣೆಮಂಗಳೂರಿನಲ್ಲಿ ಕೆಲಕಾಲ ಟ್ರಾಫಿಕ್ ಜಾಮ್

ಬಂಟ್ವಾಳ: ರಸ್ತೆ ಸಮತಟ್ಟು ಮಾಡುವ ಡೋಸರ್ ವಾಹನಕ್ಕೆ ಲಾರಿಯೊಂದು ಡಿಕ್ಕಿ ಹೊಡೆದ ರಭಸಕ್ಕೆ ಸ್ಟೇರಿಂಗ್ ಕಡಿತಗೊಂಡು ರಸ್ತೆ ಮಧ್ಯದಲ್ಲಿ ಬಾಕಿಯಾಗಿ ನಿಂತ ಘಟನೆ ಬುಧವಾರ ಬೆಳಗ್ಗೆ ಪಾಣೆಮಂಗಳೂರಿನಲ್ಲಿ ನಡೆಯಿತು.

ಬಿಸಿರೋಡಿನ ಕಡೆಯಿಂದ ಬರುತ್ತಿದ್ದ ಪಾರ್ಸೆಲ್ ಸಾಮಾಗ್ರಿಗಳನ್ನು ಕೊಂಡುಹೋಗುವ ಲಾರಿ ಪಾಣೆಮಂಗಳೂರು ಸೇತುವೆ ಕಳೆದು ಮುಂದೆ ಹೋಗುತ್ತಿದ್ದ ವೇಳೆ ಡೋಸರ್ ವಾಹನಕ್ಕೆ ಡಿಕ್ಕಿಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಸ್ಟೇರಿಂಗ್ ತುಂಡಾದ ತಕ್ಷಣ ಲಾರಿ ನಿಯಂತ್ರಣ ಕಳೆದುಕೊಂಡು ರಸ್ತೆ ಕಾಮಗಾರಿಗಾಗಿ ರಸ್ತೆಯ ಬದಿಯಲ್ಲಿ ತಾತ್ಕಾಲಿಕವಾಗಿ ಇಟ್ಟಿರುವ ಡಿವೈಡರ್ ಗೆ ಡಿಕ್ಕಿಯಾಗಿ ನಿಂತಿತ್ತು. ಘಟನೆ ಬೆಳಿಗ್ಗೆ ಸುಮಾರು 7 ಗಂಟೆಗೆ ನಡೆದಿದ್ದು, ಘಟನೆಯ ಬಳಿಕ ಎರಡು ಗಂಟೆಗಳ ಕಾಲ ನಿರಂತರವಾಗಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಯಿತು. ಶಾಲಾ ಮಕ್ಕಳು ಸಹಿತ ಕೆಲಸಕ್ಕೆ ಹೋಗುವವರು ಪರದಾಟ ಅನುಭವಿಸಬೇಕಾಯಿತು. ಟ್ರಾಫಿಕ್ ಎಸ್.ಐ. ಮತ್ತು ಸಿಬಂದಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಾಹನಗಳ ಡಿಕ್ಕಿ, ಪಾಣೆಮಂಗಳೂರಿನಲ್ಲಿ ಕೆಲಕಾಲ ಟ್ರಾಫಿಕ್ ಜಾಮ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*