ರಾಯಚೂರಿನ ಕಲಾಸಂಕುಲ ವತಿಯಿಂದ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ರಾಯಚೂರಿನ ರಂಗಮಂದಿರದಲ್ಲಿ ಸೆ.8ರಂದು ನಡೆಯಲಿದ್ದು ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿಯ ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರನ್ನು ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಶಾಲಾ ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಂಘ ಸಂಸ್ಥೆಗಳ ಸಹಕಾರದಲ್ಲಿ ಪಠ್ಯೇತರ ಚಟುವಟಿಕೆಗಳು ಹಾಗೂ ಶಾಲಾ ಭೌತಿಕ ಅಭಿವೃದ್ಧಿಗೆ ತೊಡಗಿಸಿಕೊಂಡು ಸಮುದಾಯದ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರುವುದನ್ನು ಗುರುತಿಸಿ ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ, ಸಣ್ಣ ನೀರಾವರಿ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸುರಾಜು ಹಾಗೂ ರಾಯಚೂರು ಸಂಸದರಾದ ಜಿ ಕುಮಾರ್ ನಾಯಕ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಕಲಾ ಸಂಕುಲ ಸಂಸ್ಥೆಯ ಅಧ್ಯಕ್ಷರಾದ ರೇಖಾ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ"
Be the first to comment on "ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ"