ಮನರಂಜನೆ

ದೃಷ್ಟಿಬೊಟ್ಟು: ಕಲರ್ಸ್ ಕನ್ನಡದಲ್ಲಿ ನೋಡಿರಿ ಹೊಸ ಧಾರಾವಾಹಿ

ಜಾಹೀರಾತು

ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಟಿ ಅಂಬಿಕಾ ಈ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ. ಜೊತೆಗೆ ದೀಪಶ್ರೀ, ರಾಘು ಶಿವಮೊಗ್ಗ, ಅಶೋಕ್ ಹೆಗ್ಡೆ ಸೇರಿದಂತೆ ಅನೇಕ ಕಿರಿ ಹಿರಿ ನಟನಟಿಯರು ನಿಮ್ಮ ಮನಸೂರೆಗೊಳ್ಳಲು ಕಾದಿದ್ದಾರೆ. ‘ಈ ಧಾರಾವಾಹಿಯ ಪ್ರತಿಯೊಂದು ಪಾತ್ರವೂ ವೀಕ್ಷಕರ ಮನಗೆಲ್ಲುವಂತಿದೆ’ ಎನ್ನುತ್ತಾರೆ ಕಲರ್ಸ್ ಕನ್ನಡದ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್. ಅತ್ಯಾಧುನಿಕ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಣ ಮಾಡಿರುವುದು ‘ದೃಷ್ಟಿ ಬೊಟ್ಟು’ ಧಾರಾವಾಹಿಯ ಮತ್ತೊಂದು ಹೆಗ್ಗಳಿಕೆ ಎಂದು ಕಲರ್ಸ್ ಹೇಳಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

6 hours ago