ಬಂಟ್ವಾಳ: ಅಪರಿಚಿತ ಮಹಿಳೆಯ ಶವವೊಂದು ಬಂಟ್ವಾಳದ ನೇತ್ರಾವತಿ ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿ ಸೆ.5ರಂದು ಗುರುವಾರ ಬೆಳಿಗ್ಗೆ ಪತ್ತೆಯಾಗಿದೆ. ಶಂಭೂರು ಗ್ರಾಮದಲ್ಲಿರುವ ಎ.ಎಮ್.ಆರ್.ಪವರ್ ಲಿ.ಡ್ಯಾಂನಲ್ಲಿ ಕೆಲಸ ಮಾಡುತ್ತಿದ್ದವರು ಮೃತದೇಹವನ್ನು ನೋಡಿ ಬಂಟ್ವಾಳ ಗ್ರಾಮಾಂತರ ಪೋಲೀಸರಿಗೆ ದೂರು ನೀಡಿದ್ದಾರೆ. ಡ್ಯಾಂ ನ 4 ನೇ ಗೇಟ್ ನ ಬಳಿ ಸುಮಾರು 40 ವರ್ಷದ ಅಪರಿಚಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದ್ದು, ಸುಮಾರು 15 ದಿನಗಳ ಹಿಂದೆ ಮಹಿಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ ತಿಂಗಳಲ್ಲೂ ಇದೇ ರೀತಿ ನೇತ್ರಾವತಿ ನದಿಯಲ್ಲಿ ಶಂಭೂರು ಎಎಂಆರ್ ಗೇಟ್ ಬಳಿ ಮಹಿಳೆಯ ಶವವೊಂದು ಪತ್ತೆಯಾಗಿತ್ತು. ಇದೀಗ ಒಂದು ತಿಂಗಳ ಅವಧಿಯಲ್ಲಿ ಎರಡನೇ ಮಹಿಳೆಯ ಶವ ಪತ್ತೆಯಾದಂತಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮತ್ತೊಂದು ಅಪರಿಚಿತ ಮಹಿಳೆಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ"