ಬಂಟ್ವಾಳ ತಾಲೂಕಿನ ಪ್ರಮುಖ ಗಣೇಶೋತ್ಸವಗಳಲ್ಲಿ ಒಂದಾದ ಹಿಂದು ಧಾರ್ಮಿಕ ಸೇವಾ ಸಮಿತಿ ಬಿಸಿರೋಡು ಆಶ್ರಯದ 45 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನದ ಬಳಿ ಹಾಕಲಾದ ಭವ್ಯ ಸಭಾಮಂಟಪದಲ್ಲಿ ಚಾಲನೆ ನೀಡಲಾಯಿತು. ಸಮಿತಿ ಅಧ್ಯಕ್ಷ ಸತೀಶ್ ಭಂಡಾರಿ, ಉಪಾಧ್ಯಕ್ಷ ಸುರೇಶ್ ಕುಮಾರ್ ಕೈಕಂಬ, ಪ್ರಧಾನ ಕಾರ್ಯದರ್ಶಿ ಎಂ. ಸತೀಶ್ ಶೆಟ್ಟಿ ಮೊಡಂಕಾಪು, ಕೋಶಾಧ್ಯಕ್ಷ ಎನ್.ಶ್ರೀಧರ ಶೆಣೈ ಬಿ.ಸಿ.ರೋಡ್, ಜೊತೆ ಕಾರ್ಯದರ್ಶಿ ಭಾಸ್ಕರ ಟೈಲರ್ ಕಾಮಾಜೆ, ಪ್ರಮುಖರಾದ ಬಿ.ಮೋಹನ್ ಸಹಿತ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮಂಗಳವಾರ ಬೃಹತ್ ಶೋಭಾಯಾತ್ರೆ ಸಂಜೆ 4 ಗಂಟೆ ಬಳಿಕ ನಡೆಯಲಿದೆ.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)