ಬಂಟ್ವಾಳ

ಬಿ.ಸಿ.ರೋಡ್ ತಲಪಾಡಿ ಬಳಿ ಭೀಕರ ಅಪಘಾತ: ನವವಿವಾಹಿತ ಪತಿ ಗಂಭೀರ, ಪತ್ನಿ ಮೃತ್ಯುವಶ

ಬಂಟ್ವಾಳ: ಹೊಸತಾಗಿ ಮದುವೆಯಾದ ಪತಿ, ಪತ್ನಿ ಕಾರಿನಲ್ಲಿ ಸಾಗುತ್ತಿದ್ದ ವೇಳೆ ಬಿ.ಸಿ.ರೋಡ್ ತಲಪಾಡಿ ಬಳಿ ಶನಿವಾರ ಅಪಘಾತಕ್ಕೀಡಾಗಿದೆ. ಇದರಿಂದ ಪತ್ನಿ ಸಾವನ್ನಪ್ಪಿದ್ದು, ಪತಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ  ಬಂಟ್ವಾಳದ ತಲಪಾಡಿ ಎಂಬಲ್ಲಿ ಘಟನೆ ನಡೆದಿದೆ ನಡೆದಿದೆ. ಬಂಟ್ವಾಳ ತಾಲೂಕಿನ ಪೆರ್ನೆ ಸಮೀಪದ ವಡ್ಯದಗಯ ನಿವಾಸಿ ಅನಿಶ್ ಕೃಷ್ಣ ಎಂಬವರ ಪತ್ನಿ  ಮಾನಸ ಸಾವನ್ನಪ್ಪಿದವರು.

ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಅನಿಶ್ ಕೃಷ್ಣ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.

ಬಿಸಿರೋಡಿನ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ದಂಪತಿಯ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ರಸ್ತೆಯಿಂದ ಡಿವೈಡರ್ ಮೇಲಿನಿಂದ ಇನ್ನೊಂದು ಬದಿಗೆ ಹಾರಿ ಮಂಗಳೂರು ಕಡೆಯಿಂದ ಬಿಸಿರೋಡಿನ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್‌ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಸಹಪ್ರಯಾಣಿಕೆ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.‌ ಘಟನೆಯಿಂದ ಹೆದ್ದಾರಿಯಲ್ಲಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಯಿತು.

ಸೆ.5ರಂದು ದೇಂತಡ್ಕ ದೇವಸ್ಥಾನದಲ್ಲಿ ಇವರ ಮದುವೆ ನಡೆದಿತ್ತು.  ಇಂದು ದೇಂತಡ್ಕ ದೇವಸ್ಥಾನಕ್ಕೆ ಬಂದು ವಾಪಸು ಹೋಗುವ ವೇಳೆ ಈ ‌ಘಟನೆ ನಡೆದಿದೆ ಎನ್ನಲಾಗಿದೆ. ಇಬ್ಬರು ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ.

ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ