ಬಂಟ್ವಾಳದ ಜಕ್ರಿಬೆಟ್ಟುವಿನಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ನಡೆಯುತ್ತಿರುವ 21ನೇ ವರ್ಷದ ಶ್ರೀ ಗಣೇಶೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಮಾಜಿ ಸಚಿವ ಹಾಗೂ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ರಮಾನಾಥ ರೈ ಮಾತನಾಡಿ, ಬಂಟ್ವಾಳ ಗಣೇಶೋತ್ಸವ ಸೌಹಾರ್ದತೆಯ ಸಮ್ಮೇಳನವಾಗಿದ್ದು, ಬಂಟ್ವಾಳ ಹಬ್ಬವಾಗಿದೆ. ಜಾತಿ, ಧರ್ಮಗಳ ನಡುವೆ ವಿಷಬೀಜ ಬಿತ್ತಿ ಸಾಮರಸ್ಯ ಹಾಳುಮಾಡುವವರ ಮಧ್ಯೆ, ಮನುಷ್ಯ ಮನುಷ್ಯರ ನಡುವೆ ಸಾಮರಸ್ಯ, ಸಹಬಾಳ್ವೆ ಸ್ಥಾಪಿಸಲು ಈ ಗಣೇಶೋತ್ಸವ ಅರ್ಥಪೂರ್ಣವಾಗಿ ನಡೆದುಕೊಂಡು ಬಂದಿದೆ, ಸಾಮರಸ್ಯದ ಬಂಟ್ವಾಳ ಸ್ಥಾಪನೆಗೆ ಕಾರ್ಯಕ್ರಮ ನಡೆಯುತ್ತದೆ ಎಂದರು.
ಮಂಗಳೂರಿನ ವೈದ್ಯ ಡಾ. ಶಿವಪ್ರಸಾದ ರೈ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಬೆಳಗ್ಗೆ ಬಂಟ್ವಾಳ ಶ್ರೀ ಸೀತಾರಾಮ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಆಗಮಿಸಿದ ಶ್ರೀ ಗಣೇಶ ಮೂರ್ತಿ ಪ್ರತಿಷ್ಟಾಪನೆ ನಡೆಯಿತು. ಬಂಟ್ವಾಳ ಪುರಸಭಾಧ್ಯಕ್ಷ ಬಿ. ವಾಸು ಪೂಜಾರಿ ಲೊರೆಟ್ಟೊ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಗಣೇಶೋತ್ಸವ ಸಮಿತಿ ಅಧ್ಯಕ್ಷ ಬಿ.ಪದ್ಮಶೇಖರ ಜೈನ್ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಪ್ರಮುಖರಾದ ಪಿಯೂಸ್ ಎಲ್. ರೋಡ್ರಿಗಸ್, ಬಾಲಕೃಷ್ಣ ಅಂಚನ್, ಚಂದ್ರಶೇಖರ ಭಂಡಾರಿ, ಅಬ್ಬಾಸ್ ಆಲಿ, ಮಾರಪ್ಪ ಶೆಟ್ಟಿ ಉಪಸ್ಥಿತರಿದ್ದರು. ರಾಜೀವ ಶೆಟ್ಟಿ ಎಡ್ತೂರು ಸ್ವಾಗತಿಸಿದರು.. ಸುದೀಪ್ ಕುಮಾರ್ ಶೆಟ್ಟಿ ವಂದಿಸಿದರು. ರಾಜೀವ ಕಕ್ಯಪದವು ನಿರೂಪಿಸಿದರು.
Be the first to comment on "ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ 21ನೇ ವರ್ಷದ ಗಣೇಶೋತ್ಸವಕ್ಕೆ ಚಾಲನೆ"