ಕರಾವಳಿ ಸುದ್ದಿ ವಾರಪತ್ರಿಕೆಯ ನೂತನ ವೆಬ್ ಸೈಟ್ ಚಾಲನೆ

ಬಂಟ್ವಾಳ : ಕರಾವಳಿ ಸುದ್ದಿ ವಾರಪತ್ರಿಕೆಯ ನೂತನ ವೆಬ್ ಸೈಟ್ www.karavalisuddi.com ಸಪ್ಟೆಂಬರ್ 8ರ ಭಾನುವಾರ ಲೋಕಾರ್ಪಣೆಗೊಂಡಿತು. ಸೂರಿಕುಮೇರುವಿನಲ್ಲಿರುವ ಸೈಂಟ್ ಜೋಸೆಫ್ ಚರ್ಚ್ ನ ಧರ್ಮಗುರು ವಂದನೀಯ ಫಾದರ್ ನವೀನ್ ಪ್ರಕಾಶ್ ಡಿ’ಸೋಜ ನೂತನ ವೆಬ್ ಸೈಟ್ ಅನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಕಥೊಲಿಕ್ ಸಭಾದ ಕೇಂದ್ರೀಯ ಅಧ್ಯಕ್ಷ ಆಲ್ವಿನ್ ಡಿಸೋಜ ಪಾನೀರ್ ಮಾತನಾಡಿ, ಮಾತೆ ಮೇರಿಯಮ್ಮನವರ ಹುಟ್ಟುಹಬ್ಬದ ದಿನದಂದೇ ಕರಾವಳಿ ಸುದ್ದಿ ವಾರಪತ್ರಿಕೆಯ ತಂಡ ನೂತನ ವೆಬ್ ಸೈಟ್ ಆರಂಭಿಸಿರುವುದು ಸಂತೋಷದ ವಿಚಾರ ಎಂದ ಅವರು, ಹೇಗೆ ಕನ್ಯಾ ಮರಿಯಮ್ಮನ ಮುಕಾಂತರ ಧರೆಗೆ ಇಳಿದು ಬಂದ ಪ್ರಭು ಯೇಸು ಕ್ರಿಸ್ತರು ಬೆಳಕಾದರು ಹಾಗೆಯೇ ಈ ಮಾಧ್ಯಮ ಸಮಾಜಕ್ಕೆ ಬೆಳಕಾಗಲಿ ಎಂದು ಹಾರೈಸಿದರು.

ಕರಾವಳಿ ಸುದ್ದಿ ವಾರಪತ್ರಿಕೆ ಸಂಪಾದಕ ರೋಷನ್ ಬೊನಿಫಾಸ್ ಮಾರ್ಟಿಸ್ ರವರು ಮಾತನಾಡಿ, ಕರಾವಳಿ ಸುದ್ಧಿ ವಾರಪತ್ರಿಕೆಗೆ ಓದುಗರಿಂದ ಉತ್ತಮ ಸ್ಪಂದನೆ ದೊರಕುತ್ತಿದೆ, ಈ ಪ್ರೇರಣೆಯಿಂದಲೇ ನಮ್ಮ ಬಳಗ ನೂತನ ವೆಬ್ ಸೈಟ್ ಆರಂಭಿಸಿದ್ದು, ಮುಂದಿನ ದಿನಗಳಲ್ಲಿಯೂ ಅರಿವಿನತ್ತ ನಮ್ಮಚಿತ್ತ ಎನ್ನುವ ಘೋಷವಾಕ್ಯದೊಂದಿಗೆ ಮುನ್ನಡೆಯಲಿದೆ ಎಂದರು.
ಸೂರಿಕುಮೇರು ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸ್ಟೀವನ್ ಪ್ರಕಾಶ್ ಮಾರ್ಟಿಸ್, ಕಾರ್ಯದರ್ಶಿ ಸ್ವೀವನ್ ಆಲ್ವಿನ್ ಪಾಯ್ಸ್, ಚರ್ಚ್ ಆಯೋಗಗಳ ಸಂಯೋಜಕ ಎಲಿಯಾಸ್ ಪಿರೇರಾ, ಕಥೋಲಿಕ್ ಸಭಾ ಸೂರಿಕುಮೇರು ಘಟಕದ ಅಧ್ಯಕ್ಷ ತೊಮಸ್ ಲಸ್ರಾದೋ, ಉಪಸಂಪಾದಕಿ ಅನಿತಾ ಮಾರ್ಟಿಸ್ ಮತ್ತಿತರರು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕರಾವಳಿ ಸುದ್ದಿ ವಾರಪತ್ರಿಕೆಯ ನೂತನ ವೆಬ್ ಸೈಟ್ ಚಾಲನೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*