‘ಲೊರೆಟ್ಟೊ ಮಾತಾ ಚರ್ಚಿನಲ್ಲಿ ಕನ್ಯಾ ಮಾತೆಯ ಹುಟ್ಟುಹಬ್ಬದ ದಿನವಾದ (ಮೊಂತಿ ಫೆಸ್ತ್) ತೆನೆಹಬ್ಬವನ್ನು ಭಕ್ತಿ ಪೂರ್ವಕವಾಗಿ ವಿಜ್ರಂಭಣೆಯಿಂದ ಆಚರಿಸಲಾಯಿತು. . ಚರ್ಚ್ ಧರ್ಮಗುರುಗಳಾದ ವಂ. ಫ್ರಾನ್ಸಿಸ್ ಕ್ರಾಸ್ತ, ಲೋರೆಟ್ಟೋ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ವಂ. ಜೇಸನ್ ಮೋನಿಸ್ ಪ್ರಧಾನ ಧರ್ಮಗುರುಗಳಾಗಿ ವಂ ಗ್ಲ್ಯಾಡ್ವಿನ್ ಫೆರ್ನಾಂಡಿಸ್ ಹಾಗೂ ಗುಜರಾತ್ ಧರ್ಮ ಪ್ರಾಂತ್ಯದಲ್ಲಿ ಸೇವೆ ನೀಡುತ್ತಿರುವ ವಂ ಜೇಮ್ಸ್ ವಾಸ್, ವಂ. ಜೆರಾಲ್ಡ್ ಪೀಟರ್ ಲೋಬೊ ಬಲಿಪೂಜೆಯನ್ನು ಅರ್ಪಿಸಿದರು.
ಪ್ರಧಾನ ಧರ್ಮಗುರುಗಳು ದೇವರವಾಕ್ಯದ ಸಂದೇಶದಲ್ಲಿ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ತ್ಯಾಗಮಯ ಜೀವನದ ಬಗ್ಗೆ ಪ್ರವಚನ ನೀಡಿದರು. ಕನ್ಯಾಮಾತೆಯ ಪಲ್ಲಕ್ಕಿಯನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಚರ್ಚ್ ವಠಾರದಲ್ಲಿ ಎಲ್ ಇ ಡಿ ಪರದೆಯನ್ನು ಅಳವಡಿಸಲಾಗಿತ್ತು. ಕಳೆದ 9 ದಿನಗಳಿಂದ ನಡೆದ ಮಾತೆ ಮರಿಯಮ್ಮನವರ ನೋವೆನಾ ಪ್ರಾರ್ಥನೆಗೆ ಮಕ್ಕಳು ಹೂಗಳನ್ನು ಅರ್ಪಿಸಿದರು. ಎಲ್ಲರಿಗೂ ತೆನೆಯನ್ನು ನೀಡಿ ಗೌರವಿಸಲಾಯಿತು. ಚರ್ಚ್ ಪಾಲನಾ ಮಂಡಳಿ ನೇತೃತ್ವ ವಹಿಸಿದ್ದರು. ಸಾಧಕ ವಿದ್ಯಾರ್ಥಿಗಳನ್ನು ಇದೇ ವೇಳೆ ಸನ್ಮಾನಿಸಲಾಯಿತು.
Be the first to comment on "ಲೊರೆಟ್ಟೊ ಮಾತಾ ಚರ್ಚ್ ನಲ್ಲಿ ಮೊಂತಿ ಫೆಸ್ತ್"