ಸಿದ್ಧಕಟ್ಟೆ ಹಿಂದೂ ಹಿತರಕ್ಷಣಾ ಸಮಿತಿ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶನಿವಾರ ನಡೆದ ಮಹಿಳಾ ಧಾರ್ಮಿಕ ಸಭೆಯಲ್ಲಿ ಪ್ರಾಧ್ಯಾಪಕಿ ಅರ್ಪಿತಾ ಪ್ರಶಾಂತ್ ಶೆಟ್ಟಿ ಕಟಪಾಡಿ ಭೌಧಿಕ್ ನೀಡಿದರು. ಮುಖ್ಯಶಿಕ್ಷಕಿ ಪೂರ್ಣಿಮಾ ಜೈನ್ ಕಲ್ಮಂಜ, ಅಂಚೆ ಅಧಿಕಾರಿ ರಾಜೇಶ್ವರಿ ಸಿದ್ಧಕಟ್ಟೆ, ಪ್ರಾಧ್ಯಾಪಕಿ ವಿಜಯಲಕ್ಷ್ಮಿ ನಾಯಕ್, ಯೋಜನಾಧಿಕಾರಿ ಮಲ್ಲಿಕಾ ಧಾರವಾಡ ಮತ್ತಿತರರು ಉಪಸ್ಥಿತರಿದ್ದರು.