ಬಂಟ್ವಾಳ

ಬ್ಯಾಂಕಿನಿಂದ ಹಣ ಡ್ರಾ ಮಾಡಿದ ಸ್ವಲ್ಪ ಹೊತ್ತಿನಲ್ಲೇ ಕಳವು

ನಿವೃತ್ತ ಸೈನಿಕ ,ಹಿರಿಯ ನಾಗರಿಕರೋರ್ವರು ಬಿ.ಸಿ.ರೋಡಿನ ರಾಷ್ಟ್ರೀಕೃತ ಬ್ಯಾಂಕಿನಿಂದ ಹಣವನ್ನು ಡ್ರಾ ಮಾಡಿದ ಕೆಲ ಹೊತ್ತಿನಲ್ಲೇ ಲಕ್ಷಾಂತರ ರೂ ನಗದು ಇದ್ದ ಬ್ಯಾಗ್ ನ್ನು ಬ್ಯಾಂಕಿನೊಳಗಿಂದಲೇ ಕಳವುಗೈದ ಮಾಡಿದ ಕುರಿತು ಬಂಟ್ವಾಳ ನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು

ಬಂಟ್ವಾಳದ ಅಂಬ್ರೋಸ್ ಡಿ‌ಸೋಜ ಬ್ಯಾಗ್, ಬಿಸಿರೋಡಿನ‌ಲ್ಲಿರುವ ಸ್ಟೇಟ್ ಬ್ಯಾಂಕ್ ನ ಒಳಗಿನಿಂದ ಕಳವಾಗಿದೆ. ಒಟ್ಟು  ರೂ.1,30,000 ನಗದು ಕಳವಾಗಿದೆ ಎಂದವರು ದೂರಿನಲ್ಲಿ ತಿಳಿಸಿದ್ದಾರೆ. ಸೆ.4ರಂದು ಘಟನೆ ನಡೆದಿದ್ದು, ಇದೀಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯ ವಿವರ ಹೀಗಿದೆ:

ಅಂಬ್ರೋಸ್ ಅವರು ನಿವೃತ್ತ ಸೈನಿಕರಾಗಿದ್ದು, ಪೆನ್ಸನ್ ಹಣವನ್ನು ಮೂರು ಅಥವಾ ನಾಲ್ಕು ತಿಂಗಳಿಗೊಮ್ಮೆ ತಮ್ಮ ಖಾತೆಯಿಂದ ‌ಡ್ರಾ ಮಾಡುತ್ತಿದ್ದರು. ಸಮುದಾಯದ ಬಡವರಿಗೆ ಸಹಾಯ ಮಾಡುವ ಉದ್ದೇಶದಿಂದ ಸೆ.4 ರಂದು ಒಟ್ಟು 50 ಸಾವಿರ ಹಣವನ್ನು ಬ್ಯಾಗ್ ಒಂದರಲ್ಲಿ ಇರಿಸಿಕೊಂಡು ಬಿಸಿರೋಡಿನ ಎಸ್.ಬಿ.ಐಗೆ ಬಂದಿದ್ದರು. ಇಲ್ಲಿನ ಇವರ ಖಾತೆಯಿಂದ 80 ಸಾವಿರ ಹಣವನ್ನು ಡ್ರಾ ಮಾಡಿ, ಒಟ್ಟು 1,30,000 ಹಣವನ್ನು ಒಂದೇ ಬ್ಯಾಗ್ ನಲ್ಲಿ ಹಾಕಿ ಬ್ಯಾಂಕ್ ನ ಟೇಬಲ್ ಮೇಲೆ ಇಟ್ಟು, ಪಾಸ್ ಬುಕ್ ಎಂಟ್ರಿ ಮಾಡಲು ಕೌಂಟರ್ ಬಳಿ ಹೋಗಿದ್ದರು. ಅಲ್ಲಿ ಎಂಟ್ರಿ ಮಾಡಿಸಿ ವಾಪಸು ಟೇಬಲ್ ಕಡೆ ಬಂದಾಗ ಬ್ಯಾಗ್ ಅಲ್ಲಿರದೆ ಕಾಣೆಯಾಗಿತ್ತು. ಇದೀಗ ಪಾಸ್ ಬುಕ್ ಹಾಗೂ ದಾಖಲೆಗಳಿದ್ದ ಕಳವಾದ ಬ್ಯಾಗ್ ಬಿಸಿರೋಡು ಕೈಕುಂಜೆ ರಸ್ತೆಯಲ್ಲಿ ಸಿಕ್ಕಿದೆ. ಕಳವು ಆಗಿರುವ ಹಣವನ್ನು ಮತ್ತು ಕಳವು ಮಾಡಿದ ಕಳ್ಳರನ್ನು ಪತ್ತೆ ಮಾಡಿಕೊಡಿ ಎಂದು ಅಂಬ್ರೋಸ್ ಅವರು ನಗರ ಪೋಲೀಸ್ ಠಾಣೆಗೆ ತಡವಾಗಿ ದೂರು ನೀಡಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

8 hours ago