ರಾಜ್ಯ ಸರ್ಕಾರದ ನಿರ್ದೇಶನದನ್ವಯ ಬಂಟ್ವಾಳ ತಾಲೂಕಿನಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಭಾನುವಾರ ಫರಂಗಿಪೇಟೆಯಿಂದ ಮಿತ್ತೂರು, ಕಬಕದ ವರೆಗೆ ಮಾನವ ಸರಪಳಿಯನ್ನು ರೂಪಿಸಲಾಯಿತು.
ಆರಂಭದಲ್ಲಿ ನಾಡಗೀತೆ ಹಾಡಿ, ಬಳಿಕ ಪ್ರಮುಖರಿಂದ ಸಂದೇಶ ನೀಡಿದ ಬಳಿಕ ಸಂವಿಧಾನದ ಪ್ರಸ್ತಾವನೆಯನ್ನು ಓದಲಾಯಿತು. ಬಳಿಕ ಎಲ್ಲರೂ ಪರಸ್ಪರ ಕೈಕೈ ಹಿಡಿದುಕೊಂಡು ಸರಪಳಿಯನ್ನು ನಿರ್ಮಿಸಿದರು.
ಬಿ.ಸಿ.ರೋಡ್ ಫ್ಲೈಓವರ್ ಕೆಳಗೆ ನಡೆದ ಕಾರ್ಯಕ್ರಮದಲ್ಲಿ ಬಂಟ್ವಾಳ ಪುರಸಭಾಧ್ಯಕ್ಷ ಬಿ.ವಾಸು ಪೂಜಾರಿ ಲೊರೆಟ್ಟೊ ಸಂದೇಶ ನೀಡಿ, ಪ್ರಜಾಪ್ರಭುತ್ವ ರಕ್ಷಣೆ ಹಾಗೂ ಅದರ ಅರಿವು ಪಡೆಯುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. ಈ ಸಂದರ್ಭ ಬುಡಾ ಅಧ್ಯಕ್ಷ ಬೇಬಿ ಕುಂದರ್ ಅವರು ಹಾಗೂ ಸಾರ್ವಜನಿಕರ ಪರವಾಗಿ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿದರು.
ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಸಮಾಜ ಕಲ್ಯಾಣ ಇಲಾಖಾಧಿಕಾರಿ ಜಯಶ್ರೀ ಸಹಿತ ನಾನಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು. ಈ ಸಂದರ್ಭ ಸ್ಥಳೀಯ ಸ್ವಯಂಸೇವಾ ಸಂಘಟನೆಗಳು, ನಾನಾ ಸಂಘಟನೆಗಳ ಪ್ರಮುಖರು, ಸರಕಾರಿ ನೌಕರರ ಸಂಘ, ಸಾರ್ವಜನಿಕ ಸಂಘಟನೆಗಳು, ಸಾರ್ವಜನಿಕ ಸೇವಾ ಚಟುವಟಿಕೆಗಳಲ್ಲಿ ನಿರತರ ಸಹಿತ ಹಲವು ಮಂದಿ ಉಪಸ್ಥಿತರಿದ್ದು, ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭ ಬ್ಯಾನರ್, ಫಲಕಗಳನ್ನು ಪ್ರದರ್ಶಿಸಲಾಯಿತು.
Be the first to comment on "ಬಂಟ್ವಾಳ ತಾಲೂಕಿನಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಮಾನವ ಸರಪಳಿ ನಿರ್ಮಾಣ"