ಮಂಗಳೂರಿನ ಪುಳಿಂಚ ಸೇವಾ ಪ್ರತಿಷ್ಠಾನ, ಶಂಭೂರಿನ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ, ನರಿಕೊಂಬು ನಾಟಿಯ ಜನಕಲ್ಯಾಣ ಟ್ರಸ್ಟ್ ಆಶ್ರಯದಲ್ಲಿ ವಿವಿಧ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಶಂಭೂರಿನ ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆಯಲ್ಲಿ ಆರೋಗ್ಯ, ನೇತ್ರ ತಪಾಸಣೆ ಮತ್ತು ಚಿಕಿತ್ಸೆಯ ಉಚಿತ ಶಿಬಿರ ನಡೆಯಿತು. ಸುಮಾರು 550ಕ್ಕೂ ಅಧಿಕ ಮಂದಿ ಪ್ರಯೋಜನ ಪಡೆದುಕೊಂಡರು.
ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಉದ್ಘಾಟಿಸಿ ಶುಭ ಹಾರೈಸಿದರು. ರೋಟರಿ ಕ್ಲಬ್ ಪುತ್ತೂರು, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಟಿ ಕಣ್ಣಿನ ಆಸ್ಪತ್ರೆ, ಎ ಜೆ ಆಸ್ಪತ್ರೆ ಮಂಗಳೂರು, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಂದತ್ವ ವಿಭಾಗ , ಡಾ. ಪಿ ದಯಾನಂದ ಪೈ ಮತ್ತು ಪಿ ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ ಸೆಂಚುರಿ ಗ್ರೂಪ್ಸ್ ಬೆಂಗಳೂರು ಸಹಕಾರೋದೊಂದಿಗೆ ಶಿಬಿರ ನಡೆಯಿತು.
ಪ್ರಮುಖರಾದ ಜಗನ್ನಾಥ ಬಂಗೇರ ನಿರ್ಮಲ್, ವೈದ್ಯರಾದ ಡಾ. ವಾಮನ್ ನಾಯಕ್, ಡಾ. ಹಂಸ. ಡಾ. ತನ್ವಿ, ಶಂಭೂರು ಸರಕಾರಿ ಪ್ರಾಥಮಿಕ ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷ ಹೇಮಚಂದ್ರ ಶಂಭೂರು ಭಂಡಾರದಮನೆ, ಶ್ರೀ ರಾಮಾಂಜನೇಯ ವ್ಯಾಯಾಮ ಶಾಲೆ ಅಧ್ಯಕ್ಷ ಆನಂದ ಅಡ್ಡದಪಾದೆ, ಪುಳಿಂಚ ಸೇವಾ ಪ್ರತಿಷ್ಠಾನದ ಕೋಶಾಧಿಕಾರಿ ಪ್ರತಿಭಾ ಎಮ್ ಎಸ್. ಉಪಸ್ಥಿತರಿದ್ದರು. ಪುಳಿಂಚ ಸೇವಾ ಪ್ರತಿಷ್ಟನ(ರಿ.)ಮಂಗಳೂರು ನ ಅಧ್ಯಕ್ಷ ವಕೀಲ ಶ್ರೀಧರ ಶೆಟ್ಟಿ ಪುಳಿಂಚ ಸ್ವಾಗತಿಸಿ, ಕಮಲಾಕ್ಷ ಶಂಬೂರು ವಂದಿಸಿದರು. ಜಗದೀಶ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಶಂಭೂರು: ಆರೋಗ್ಯ, ನೇತ್ರ ತಪಾಸಣಾ, ಚಿಕಿತ್ಸೆ ಉಚಿತ ಶಿಬಿರ"