ಮನೆಯಿಂದ ನಗ, ನಗದು ಕಳವು

ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.

ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.

ಸೆ.16 ರಂದು ಸೋಮವಾರ ಬೆಳಿಗ್ಗೆ ‌ಹಬ್ಬದ ಪ್ರಯುಕ್ತ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನೋಡಲು ಮನೆಗೆ ಬೀಗ ಹಾಕಿ ತೆರಳಿದ್ದ ವೇಳೆ ಈ ಕಳ್ಳತನ ನಡೆದಿದೆ ಎನ್ನಲಾಗಿದೆ.

ರಾತ್ರಿ 12.45 ಗಂಟೆಗೆ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.
ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಮನೆಯಿಂದ ನಗ, ನಗದು ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*