ಮನೆಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗನಗದು ಕಳವು ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಂಚಿಯಲ್ಲಿ ನಡೆದಿದೆ.
ಮಂಚಿ ಗ್ರಾಮದ ಮೋಂತಿಮಾರು ನಿವಾಸಿ ಆಸ್ಮ ಎಂಬವರ ಮನೆಯಿಂದ ಕಳವು ನಡೆದಿದೆ.
ರಾತ್ರಿ 12.45 ಗಂಟೆಗೆ ವಾಪಸು ಮನೆಗೆ ಬಂದು ನೋಡಿದಾಗ ಮನೆಯ ಹಿಂಬದಿಯ ಕಿಟಕಿಯ 2 ಸರಳುಗಳನ್ನು ತುಂಡು ಮಾಡಿ ಮನೆಯ ಒಳಗೆ ಪ್ರವೇಶ ಮಾಡಿ , ಬೆಡ್ ರೂಮಿನಲ್ಲಿರುವ ಕಪಾಟು ಬೀಗ ತೆಗೆದು ಅದರೊಳಗೆ ಇರಿಸಿಲಾಗಿದ್ದ ಸುಮಾರು1 ಲಕ್ಷ 33 ಸಾವಿರ ರೂ ಮೌಲ್ಯದ ಚಿನ್ನ ಹಾಗೂ ನಗದು ಕಳವು ಮಾಡಲಾಗಿದೆ.
ರೂ.72 ಸಾವಿರ ಮೌಲ್ಯದ ಅರ್ಧ ಪವನ್ ತೂಕದ ಚಿನ್ನದ ಸರ,ರೂ. 24 ಸಾವಿರ ಮೌಲ್ಯದ ಅರ್ಧ ಪವನ್ ಚಿನ್ನದ ಉಂಗುರ ,ರೂ.12 ಸಾವಿರ ಮೌಲ್ಯದ 2 ಗ್ರಾಂ ತೂಕದ ಬ್ರಾಸ್ ಲೈಟ್ , ಹಾಗೂ 25 ಸಾವಿರ ರೂ ನಗದನ್ನು ಕಳವು ಮಾಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್. ಐ.ಹರೀಶ್ ಅವರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲಿಸಿದ್ದಾರೆ.
| ಪುರಸಭಾ ವ್ಯಾಪ್ತಿಯ ಜನರಲ್ಲಿ ಸಹಕಾರಕ್ಕೆ ಪ್ರಾಜೆಕ್ಟ್ ಡೈರೆಕ್ಟರ್ ಸಂತೋಷ್ ಕುಮಾರ್ ಮನವಿ | ನೀರು ಶುದ್ಧೀಕರಣ ಘಟಕಕ್ಕೆ ಭೇಟಿ,…