ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಕ್ಕಳೊಡನೆ ಕೆಸರಿಗಿಳಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ಜಾಹೀರಾತು

ರೈತ ದೇಶದ ಬೆನ್ನೆಲುಬು ಸಂತೋಷದೊಂದಿದ್ದರೆ ಇಡೀ ಜಗತ್ತೇ ಸಂತಸ ಪಡುವುದು, ಪ್ರತಿಯೊಬ್ಬರ ಆಹಾರವನ್ನು ಪೂರೈಸಿ ಎಲ್ಲರ ಹಸಿವು ನೀಗಿಸುವ ರೈತ ಯಾವಾಗಲೂ ಸಂತೋಷವಾಗಿರಬೇಕು ಜಿಲ್ಲೆಯ ಹವಾಮಾನದ  ಎಡರು ತೊಡರುಗಳನ್ನು ದಾಟಿ ಆತನು ಬದುಕಬೇಕಾಗುತ್ತದೆ.ಈ ನೆಲದ ಸಂಸ್ಕೃತಿಯು ಬೆಳೆದು ಬಂದಿರುವುದು ಗದ್ದೆಗಳಿಂದ. ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್  ಹೇಳಿದರು

ಬಂಟ್ವಾಳ ತಾಲೂಕಿನ ಅನಂತಾಡಿ ಗ್ರಾಮದ ನವ ಭಾರತ್ ಯುವಕ ಸಂಘ ( ರಿ ) ಅನಂತಾಡಿ ವತಿಯಿಂದ ಪಡಿಪಿರೆ ಗದ್ದೆಯಲ್ಲಿ ಜರಗಿದ 6 ನೇ ವರ್ಷದ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭಾಗವಹಿಸಿದ್ದರು. ಈ ಸಂದರ್ಭ ಮಕ್ಕಳ ಜೊತೆ ಮಗುವಾಗಿ ಬೆರೆತು ಕೆಸರಿನಲ್ಲಿ ಸಂಭ್ರಮಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ  ಅನೀಶ್ ಅಶ್ವತ್ತಾಡಿ ವಹಿಸಿದ್ದರು. ಕಾರ್ಯಕ್ರಮದ ಧ್ವಜಾರೋಹಣವನ್ನು ಡಾ, ರೂಪಲತಾ ಕೊಂಗಲಾಯಿ ನೆರವೇರಿಸಿ , ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಲಯನ್ಸ್ ಕ್ಲಬ್ ಮಾಣಿ ವಲಯ ಅಧ್ಯಕ್ಷರಾದ  ರಾಮ್ ಕಿಶಾನ್ ರೈ ಮಾಡಿದರು. ಕ್ರೀಡಾಕೂಟದ ಕೆಸರುಗದ್ದೆಯ ಉದ್ಘಾಟನೆಯನ್ನು ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರ ಸಂಘದ ಮಾಜಿ ಅಧ್ಯಕ್ಷ ಸಂಜೀವ ಪೂಜಾರಿ ಹಾಗೂ ವಿಠಲ ಕೋಟ್ಯಾನ್ ನೆರವೇರಿಸಿದರು.

ವೇದಿಕೆಯಲ್ಲಿ ಮಾಣಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಿರಣ್ ಹೆಗ್ಡೆ, ನಿವೃತ್ತ ಶಿಕ್ಷಕ ರಾಮಣ್ಣ ಗೌಡ ಕೋಂಗಲಾಯಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನಾರ್ಶ ಮುಖ್ಯ ಶಿಕ್ಷಕ ಗೋಪಾಲಕೃಷ್ಣ ನೆರಳಕಟ್ಟೆ, ಸರಕಾರಿ ಪದವಿ ಪೂರ್ವ ಕಾಲೇಜು ವಾಮದಪದವಿನ ರಾಧಾಕೃಷ್ಣಮೂಲ್ಯ, ಮಲ್ಲರಾಯ ದೈವ ಪರಿಚರಕರು ಗಳಾದ ರಾಮಣ್ಣ ಗೌಡ, ಬಾಲಪ್ಪ ಮಡಿವಾಳ, ಲಕ್ಷ್ಮಣ ಪೂಜಾರಿ ಬಾಕಿಲ, ಪದ್ಮನಾಭ ಪೂಜಾರಿ ಈಡೆಮುಂಡೆವು ಮೊದಲಾದವರು ಉಪಸ್ಥಿತರಿದ್ದರು.

ಕೆಸರು ಗದ್ದೆಯಲ್ಲಿ ಮಕ್ಕಳಿಗೆ,ಮಹಿಳೆಯರಿಗೆ, ಪುರುಷರಿಗೆ, ವಿವಿಧ ಕ್ರೀಡಾಕೂಟಗಳನ್ನು ನಡೆಸಲಾಯಿತು.ಹಾಗೂ ಈ ಸಂದರ್ಭದಲ್ಲಿ ನಮ್ಮ ತುಳುವ ಸಂಸ್ಕೃತಿಯ ಚಾಪೆ ನೆಯುದು , ಬುಟ್ಟಿ ನೆಯ್ಯುವುದು, ಮುಟ್ಟಾಲೆ ಕಟ್ಟುವುದು, ತೆಂಗಿನಗರಿ ನೆಯ್ಯುವುದು, ಅಕ್ಕಿ ಮುಡಿ ಕಟ್ಟುವ ಪ್ರಾತ್ಯಕ್ಷತೆ ನಡೆಸಲಾಯಿತು. ಯತೀಶ್ ಪೂಂಜಾವ್ ಸ್ವಾಗತಿಸಿ, ವೆಂಕಟೇಶ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಮಕ್ಕಳೊಡನೆ ಕೆಸರಿಗಿಳಿದ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*