ಬಂಟ್ವಾಳ ಪುಂಜಾಲಕಟ್ಟೆ ಮಾರ್ಗದ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಸೋಮವಾರ ಸಂಜೆ 4 ಗಂಟೆ ವೇಳೆ ನಡೆದ ಘಟನೆಯಲ್ಲಿ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ. ಬಸ್ ನಲ್ಲಿ ಹಲವು ಪ್ರಯಾಣಿಕರಿದ್ದು ಸುಮಾರು 13 ಮಂದಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಹಾಗೂ ಬಸ್ ನಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಐವರಿಗೆ ಸ್ವಲ್ಪ ಜಾಸ್ತಿಯೇ ಗಾಯಗಳಾಗಿದ್ದರೂ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಠಾಣಾ ಎಸ್.ಐ. ಸುತೇಶ್ ಮತ್ತು ಸಿಬಂದಿ ಭೇಟಿ ನೀಡಿದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ವಗ್ಗ ಸಮೀಪ ಮಗುಚಿದ ಕೆಎಸ್ಸಾರ್ಟಿಸಿ ಬಸ್, ಹಲವರಿಗೆ ಗಾಯ"
Be the first to comment on "ವಗ್ಗ ಸಮೀಪ ಮಗುಚಿದ ಕೆಎಸ್ಸಾರ್ಟಿಸಿ ಬಸ್, ಹಲವರಿಗೆ ಗಾಯ"