ಬಂಟ್ವಾಳ ಪುಂಜಾಲಕಟ್ಟೆ ಮಾರ್ಗದ ವಗ್ಗ ಸಮೀಪದ ಕೊಪ್ಪಳ ಎಂಬಲ್ಲಿ ಸೋಮವಾರ ಸಂಜೆ 4 ಗಂಟೆ ವೇಳೆ ನಡೆದ ಘಟನೆಯಲ್ಲಿ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಹೋಗುತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ ಬಿದ್ದಿದೆ. ಬಸ್ ನಲ್ಲಿ ಹಲವು ಪ್ರಯಾಣಿಕರಿದ್ದು ಸುಮಾರು 13 ಮಂದಿಗೆ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಹಾಗೂ ಬಸ್ ನಲ್ಲಿ ಸಿಲುಕಿಕೊಂಡವರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಐವರಿಗೆ ಸ್ವಲ್ಪ ಜಾಸ್ತಿಯೇ ಗಾಯಗಳಾಗಿದ್ದರೂ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಟ್ರಾಫಿಕ್ ಠಾಣಾ ಎಸ್.ಐ. ಸುತೇಶ್ ಮತ್ತು ಸಿಬಂದಿ ಭೇಟಿ ನೀಡಿದರು.
ಮನುಷ್ಯ ಮನುಷ್ಯನ ನಡುವಿನ ವಿಶ್ವಾಸವೃದ್ಧಿಗೆ ಇಫ್ತಾರ್ ಕೂಟ: ರಮಾನಾಥ ರೈ (more…)