ರಬ್ಬರ್, ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘದ ಸದಸ್ಯರಿಗೆ ಶೇ.11 ಡಿವಿಡೆಂಡ್ ಘೋಷಣೆ

ರಬ್ಬರ್ ಮತ್ತು ಜೇನು ವ್ಯವಸಾಯಗಾರರ ವಿವಿಧೋದ್ದೇಶ ಸಹಕಾರಿ ಸಂಘವು ಪ್ರಸಕ್ತ ಸಾಲಿನಲ್ಲಿ ರೂ. 42,07,570 ಲಕ್ಷ ರೂ ಲಾಭ ಗಳಿಸಿದ್ದು ಸಂಘದ ಸದಸ್ಯರಿಗೆ ಶೇ. 11 ಡಿವಿಡೆಂಡ್ ನೀಡಲಾಗುವುದು ಎಂದು ಸಂಘದ ವಾರ್ಷಿಕ ಮಹಾಸಭೆಯಲ್ಲಿ ಘೋಷಿಸಲಾಯಿತು.

ಬಂಟ್ವಾಳದ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ 2023-24 ನೇ ಸಾಲಿನ ವಾರ್ಷಿಕ ಮಹಾಸಭೆಯ ಸಭಾಧ್ಯಕ್ಷತೆಯನ್ನು ಮೋಹನ್ ಪಿ ಎಸ್ ಬಾಳ್ತಿಲ, ವಹಿಸಿಕೊಂಡು ಸಂಘವು 4,308 ಸದಸ್ಯರನ್ನೊಳಗೊಂಡು 8 ಶಾಖೆಗಳೊಂದಿಗೆ ಕಾರ್‍ಯಾಚರಿಸುತ್ತಿದೆ ಎಂದು ಮಾಹಿತಿ ನೀಡಿದರು.